ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಎನ್ ಎಸ್ ಎಸ್ ಚಟುವಟಿಕೆಗಳ ಉದ್ಘಾಟನೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ೨೦೨೪-೨೫ ಶೈಕ್ಷಣಿಕ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಪ್ರೇರಣಾ ಸಭಾಭವನದಲ್ಲಿ ನಡೆಯಿತು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ವೆಂಕಟರಮಣ ಅವರು ಕಾರ್ಯಕ್ರಮ ಉದ್ಘಾಟಿಸಿ, ರಾಷ್ಟ್ರೀಯ ಸೇವಾ ಯೋಜನೆಯ ಮಹತ್ವ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪದವಿ ವಿಭಾಗದ ಪ್ರಾಂಶುಪಾಲರಾದ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ವಹಿಸಿದ್ದರು. ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಯತಿರಾಜ್ ಪಿ, ಸಹ ಯೋಜನಾಧಿಕಾರಿ ಕು. ವರ್ಷಾ ಉಪಸ್ಥಿತರಿದ್ದರು. ಸ್ವಯಂ ಸೇವಕರಾದ ಅಶ್ವಿನಿ ಸ್ವಾಗತಿಸಿದರು, ಮಂಜುನಾಥ್ ವಂದಿಸಿ, ಧನುಶ್ರೀ ಕಾರ್ಯಕ್ರಮ ನಿರೂಪಿಸಿದರು. ಶರಣ್ಯ ವೈಯುಕ್ತಿಕ ಗೀತೆ ಹಾಡಿದರು. ತಬಲದಲ್ಲಿ ಸಾತ್ವಿಕ್ ಸಹಕರಿಸಿದರು.