“ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಆಯಾ ಶಾಲೆಗಳ ಭೌತಿಕ ಅಭಿವೃದ್ಧಿಗೆ ಪೂರಕವಾದ ಮೆಟ್ಟಲು”
ಬಂಟ್ವಾಳ : ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯು ಆಯಾ ಶಾಲೆಗಳ ಭೌತಿಕ ಅಭಿವೃದ್ಧಿಗೆ ಪೂರಕವಾದ ಮೆಟ್ಟಲುಗಳಾಗಿವೆಯಲ್ಲದೆ ಉತ್ತಮ ಫಲಿತಾಂಶವನ್ನು ಹೊಂದುವಲ್ಲಿಯು ಸಫಲವಾಗಿದೆ ಎಂದು ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪದವೀಧರ ಮುಖ್ಯ ಶಿಕ್ಷಕ ಅಬುಬಕ್ಕರ್ ಅಶ್ರಫ್ ಹೇಳಿದರು.
ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮಜಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅವರು ಮಾತಾಡಿದರು.
ಕೇವಲ ಶಿಕ್ಷಕರು ವಿದ್ಯಾರ್ಥಿಗಳ ಬೆಳವಣಿಗೆಗೆ ಕಾರಣಕರ್ತ ಆಗಲಾರ ಜೊತೆಗೆ ಪೋಷಕರ ಉತ್ತಮ ಸಹಕಾರ ಮತ್ತು ಬಾಂಧವ್ಯವನ್ನು ಬೆಳೆಸಿದಾಗ ಮಾತ್ರ ವಿದ್ಯಾರ್ಥಿಗಳು ಹಾಗೂ ಶಾಲೆಯು ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜನಾರ್ದನ ಪೂಜಾರಿ ವಹಿಸಿದ್ದರು
ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟ ಆಗ್ನೇಸ್ ಮಂಡೋನ್ಸಾ ಪ್ರಸ್ತಾವಿಸಿ, ಸ್ವಾಗತಿಸಿದರು, ದೈಹಿಕ ಶಿಕ್ಷಕ ಇಂದುಶೇಖರ್ ವಂದಿಸಿದರು, ಸಹ ಶಿಕ್ಷಕಿ ಸಂಗೀತ ಶರ್ಮ ಪಿ.ಜಿ ಕಾರ್ಯಕ್ರಮ ನಿರೂಪಿಸಿದರು.