ಮಂಗಳೂರು : ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್, ಸಂತ್ರಸ್ತ ಮಹಿಳೆಗೆ ವೈದ್ಯಕೀಯ ತಪಾಸಣೆ

ಬಿಜೆಪಿ ಮುಖಂಡ, ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ದೂರು ದಾಖಲಾದ ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಗೆ ವೈದ್ಯಕೀಯ ತಪಾಸಣೆಯನ್ನು ಮಾಡಲಾಗಿದೆ.
ಪುತ್ತೂರು ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದ್ದು, ದಕ್ಷಿಣ ಕನ್ನಡ ಮಹಿಳಾ ಠಾಣೆ ಪೊಲೀಸರು ಮಹಿಳೆಯನ್ನು ಆಸ್ಪತ್ರೆಗೆ ಕರೆತಂದಿದ್ದಾರೆ.
47 ವರ್ಷದ ನೊಂದ ಮಹಿಳೆ ಅರುಣ್ ಪುತ್ತಿಲ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. 2023 ರ ಜೂನ್ ನಲ್ಲಿ ಬೆಂಗಳೂರಿನ ಪೈ ವಿಸ್ತಾ ಹೋಟೆಲ್ ನಲ್ಲಿ ಲೈಂಗಿಕ ದೌರ್ಜನ್ಯ ನಡೆದಿದೆ. ಲೈಂಗಿಕ ದೌರ್ಜನ್ಯದ ಫೋಟೊ, ಸೆಲ್ಫಿ, ವಿಡಿಯೋ ಮಾಡಿ ಬ್ಲಾಕ್ ಮೇಲ್ ಮಾಡಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ದೂರಿನ್ವಯ IPC 417, 354A, 506 ಅಡಿಯಲ್ಲಿ ಪ್ರಕರಣವೊಂದು ದಾಖಲಾಗಿದೆ.