
ಅತೀ ವೇಗವಾಗಿ ನಿಯಂತ್ರಣ ತಪ್ಪಿದ ಬೈಕೊಂದು ಉರುಳಿಬಿದ್ದ ಪರಿಣಾಮವಾಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಸೆ.5ರ ತಡರಾತ್ರಿ ಮಂಗಳೂರಿನ ಯೆಯ್ಯಾಡಿ ಸಮೀಪದ ಹರಿಪದವಿನಲ್ಲಿ ನಡೆದಿದೆ. ಮೃತಪಟ್ಟವರನ್ನು ರಾಮಕುಂಜದ ಚೇತನ್ (24) ಹಾಗೂ ಕೋಡಿಕಲ್ ನಿವಾಸಿ ಕಾಶೀನಾಥ್(17) ಎಂದು ಗುರುತಿಸಲಾಗಿದೆ.
ರಾಮಕುಂಜ ಗ್ರಾಮದ ಪಾದೆ ನಿವಾಸಿ ಚೆನ್ನಪ್ಪ ಕುಲಾಲ್ ಅವರ ಪುತ್ರನಾಗಿರುವ ಮೃತ ಚೇತನ್ ಅವರು ಲಾರಿಯೊಂದಕ್ಕೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ವೇಳೆಯಲ್ಲಿ ನಿಯಂತ್ರಣ ತಪ್ಪಿ ಬೈಕ್ ಉರುಳಿಬಿದ್ದಿದೆ. ಇದರ ಪರಿಣಾಮವಾಗಿ ಯುವಕರಿಬ್ಬರೂ ರಸ್ತೆಗೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
