ಬಂಟ್ವಾಳ: ತಲಪಾಡಿಯಲ್ಲಿ ಭೀಕರ ಕಾರು ಅಪಘಾತ, ನವ ವಿವಾಹಿತೆ ಸಾವು

ಬಿಸಿರೋಡ್ ತಲಪಾಡಿಯಲ್ಲಿ ಭೀಕರ ಅಪಘಾತವಾಗಿದೆ. ಘಟನೆಯಲ್ಲಿ ನವ ವಿವಾಹಿತೆ ಸಾವನ್ನಪ್ಪಿ ಪತಿ ಗಂಭೀರ ಗಾಯಗೊಂಡಿದ್ದಾರೆ. ಬಂಟ್ವಾಳ ತಾಲೂಕಿನ ತಲಪಾಡಿಯಲ್ಲಿ ಈ ಘಟನೆ ನಡೆದಿದೆ. ಕಾರು ಅಪಘಾತದಲ್ಲಿ ನವವಿವಾಹಿತೆ ಸಾವನ್ನಪ್ಪಿದ್ದಾರೆ. ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ ಮಾನಸ ಮೃತರು ಎಂದು ಹೇಳಲಾಗಿದೆ.
ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿ.ಸಿ.ರೋಡ್ ಕಡೆಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಆಲ್ಟೋ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಹಾರಿ ಕೆ.ಎಸ್.ಆರ್‌ಟಿ.ಸಿ ಬಸ್ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸೆ.5 ರಂದು ದೇಂತಡ್ಕ ದೇವಸ್ಥಾನದಲ್ಲಿ ಮದುವೆ ನಡೆದಿತ್ತು. ಮದುವೆ ಕಾರ್ಯಕ್ರಮದ ವಿಚಾರವಾಗಿ ಕೆಲವೊಂದು ಲೆಕ್ಕಾಚಾರ ಮಾಡಲು ದೇಂತಡ್ಕ ದೇವಸ್ಥಾನಕ್ಕೆ ಬಂದಿದ್ದರು ಎಂದು ಹೇಳಲಾಗಿದೆ. ವಾಪಸು ಮನೆಗೆ ಹೋಗುವ ವೇಳೆ ಘಟನೆ ನಡೆದಿದೆ ಎಂದು ಬಂಟ್ವಾಳ ಪೊಲೀಸರು ಹೇಳಿದ್ದಾರೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.