ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಮಾಡಿದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಅನ್ನ, ನೀರು ಸ್ವೀಕರಿಸದೇ ಹಠ ಹಿಡಿದು ಕುಳಿತಿದ್ದಾನೆ. ಪ್ರಕರಣದ ವಿಚಾರಣೆಯನ್ನು ಬೆಂಗಳೂರು ಕೋರ್ಟ್​ಗೆ ವರ್ಗಾಯಿಸುವಂತೆ ಹಾಗೂ ಪ್ರತ್ಯೇಕ ಸೆಲ್‌ನಿಂದ ತನ್ನನ್ನು ಪ್ರಧಾನ ಸೆಲ್‌ಗೆ ಶಿಫ್ಟ್‌ ಮಾಡುವಂತೆ ಒತ್ತಾಯಿಸಿ ಈತನು ಆಹಾರ ಸೇವಿಸುತ್ತಿಲ್ಲ.

ಕಳೆದ ವರ್ಷ ನವೆಂಬರ್ 12ರಂದು ಉಡುಪಿಯ ನೇಜಾರ್ ಬಳಿಯ ತ್ರಿಪಾಠಿ ನಗರದಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ನಡೆದಿತ್ತು. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಉದ್ಯೋಗಿಯಾಗಿದ್ದ ಪ್ರವೀಣ್ ಅರುಣ್ ಚೌಗುಲೆ ಉಡುಪಿಯಲ್ಲಿನ ಮನೆಗೆ ನುಗ್ಗಿ ಕೊಲೆ ಮಾಡಿದ್ದ. ಈ ಆರೋಪಿಗೆ ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್​ನಲ್ಲಿ ಇಡಲಾಗಿದೆ.

ಈ ಪ್ರವೀಣ್‌ಗೆ ಜೀವ ಬೆದರಿಕೆ ಇರುವುದರಿಂದ ಪ್ರತ್ಯೇಕ ಸೆಲ್‌ನ ಅಗತ್ಯ ಇದೆ ಎಂದು ಜೈಲ್​ನ ಸಹಾಯಕ ಅಧೀಕ್ಷಕರು ಕೋರ್ಟ್‌ಗೆ ಸ್ಪಷ್ಟನೆ ನೀಡಿದ್ದಾರೆ. ಜೀವ ಬೆದರಿಕೆಯಿಂದಾಗಿ ನವೆಂಬರ್ 27ರಂದು ಉಡುಪಿಯಿಂದ ಬೆಂಗಳೂರಿಗೆ ಆರೋಪಿಯನ್ನು ಪೊಲೀಸರು ಶಿಫ್ಟ್ ಮಾಡಿದ್ದರು.

By suddi9

Leave a Reply

Your email address will not be published. Required fields are marked *