ಮಂಗಳೂರು: ಫೇಸ್ ಬುಕ್ ಪೇಜ್‌ನಲ್ಲಿ ಹಿಂದೂ ದೇವತೆಗಳಿಗೆ ಅಪಮಾನ

ಸಾಮಾಜಿಕ ಜಾಲತಾಣದಲ್ಲಿ ಹಿಂದೂ ದೇವತೆಗಳಿಗೆ ಅಪಮಾನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯಿಂದ ಉರ್ವ ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿದೆ. ಫ್ಯಾಕ್ಟ್ ವಿದ್ ಎಂಬ ಹೆಸರಿನ ಫೇಸ್ ಬುಕ್ ಪೇಜ್ ನಲ್ಲಿ ಎಐ ಆಧಾರಿತವಾಗಿ ಹಿಂದೂ ದೇವರುಗಳ ಚಿತ್ರ ರಚಿಸಿ ಹಿಂದೂ ದೇವತೆಗಳ ಅಪಮಾನ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಫೋಟೋಗಳಿಗೆ ಧಾರ್ಮಿಕ ಭಾವನೆಗಳಿಗೆ ನೋವುಂಟಾಗುವಂತೆ ಕಮೆಂಟ್ ಗಳನ್ನು ಮಾಡಲಾಗುತ್ತಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ದೂರಿನಲ್ಲಿ ಆರೋಪ ಮಾಡಲಾಗಿದೆ. ಅದಲ್ಲದೇ, ಫೇಸ್ ಬುಕ್ ಪೇಜ್ ಅಡ್ಮಿನ್ ಮತ್ತು ಕಮೆಂಟ್ ಹಾಕಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಲಾಗಿದ್ದು ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಉರ್ವ ಠಾಣೆ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.