ಹಿರಿಯ ಸಿಪಿಎಂ ನಾಯಕ ಸೀತಾರಾಂ ಯೆಚೂರಿ ನಿಧನ

ತೀವ್ರ ಉಸಿರಾಟದ ಸೋಂಕಿನಿಂದ ನವದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ 72 ವರ್ಷ ವಯಸ್ಸಾಗಿತ್ತು. ಆದರೆ ಇಂದು ನಿಧನರಾಗಿದ್ದಾರೆ.
ತೀವ್ರ ಜ್ವರದಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ ಅವರನ್ನು ಆಗಸ್ಟ್ 19ರಂದು ಏಮ್ಸ್‌ನ ತುರ್ತು ವಿಭಾಗಕ್ಕೆ ದಾಖಲಿಸಲಾಗಿತ್ತು. ನ್ಯುಮೋನಿಯಾದ ಕಾರಣದಿಂದ ಸೀತಾರಾಂ ಯೆಚೂರಿ ಆಸ್ಪತ್ರೆಗೆ ಸೇರಿಸಲಾಗಿತ್ತು.
ಸೀತಾರಾಂ ಯೆಚೂರಿ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು 1992 ರಿಂದ ಸಿಪಿಐ (ಎಂ) ನ ಪಾಲಿಟ್‌ಬ್ಯೂರೋ ಸದಸ್ಯರೂ ಕೂಡ ಆಗಿದ್ದರು. ಮೊದಲು ಅವರು 2005 ರಿಂದ 2017 ರವರೆಗೆ ಪಶ್ಚಿಮ ಬಂಗಾಳದಿಂದ ರಾಜ್ಯಸಭಾ ಸಂಸದರಾಗಿದ್ದರು. ಯೆಚೂರಿ ಅವರು 1974 ರಲ್ಲಿ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾಗೆ ಸೇರಿದರು. ಇದಾದ ಒಂದು ವರ್ಷದ ಬಳಿಕ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾವನ್ನು ಸೇರಿಕೊಂಡರು.