ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ವಿಳಂಬದ ವಿರುದ್ಧ ಹೆದ್ದಾರಿ ತಡೆದು ಪ್ರತಿಭಟನೆ
ಬಂಟ್ವಾಳ: ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ವಿಳಂಬದ ವಿರುದ್ಧ ಬಿ.ಸಿ.ರೋಡಿನ ನಾರಾಯಣ ಗುರು ವೃತ್ತದ ಬಳಿ ಗುರುವಾರ ಪ್ರತಿಭಟನೆ ನಡೆಯಿತು.
ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಶಾಹುಲ್ ಎಸ್ ಎಚ್, ಕಾರ್ಯದರ್ಶಿ ಅಕ್ಬರ್ ಅಲಿ ಪೊನ್ನೋಡಿ,ಎಸ್ ಡಿ ಪಿ ಐ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಎಸ್ , ಬಂಟ್ವಾಳ ಪುರಸಭೆಯ ಉಪಾಧ್ಯಕ್ಷ ಮೂನಿಷ್ ಆಲಿ ಮಾತನಾಡಿದರು. “
ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಅಥವಾ ಕೆಎನ್ ಆರ್ ಸಂಸ್ಥೆಯ ಇಂಜಿನಿಯರ್ ಸ್ಥಳಕ್ಕಾಗಮಿಸಿ ಮನವಿಯನ್ನು ಸ್ವೀಕರಿಸಬೇಕೆಂದು ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರು. ಕೆಎನ್ ಆರ್ ಸಂಸ್ಥೆಯ ಇಂಜಿನಿಯರ್ ಸ್ಥಳಕ್ಕಾಗಮಿಸಿ ಮನವಿ ಸ್ವೀಕರಿಸಿದರು. ಮುಂದಿನ “20 ದಿನದೊಳಗಾಗಿ ಸರ್ವಿಸ್ ರಸ್ತೆಯನ್ನು ಡಾಮರೀಕರಣ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಇಲ್ಲದಿದ್ದಲ್ಲಿ ಬೇಡಿಕೆ ಈಡೇರುವವರೆಗೂ ರಸ್ತೆ ತಡೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ಅಶ್ರಫ್ ತಲಪಾಡಿ, ಶಾಕೀರ್ ಅಳಕೆಮಜಲು, ಮುಷ್ತಾಕ್ ತಲಪಾಡಿ, ಕಲಂದರ್ ಪರ್ತಿಪ್ಪಾಡಿ, ಶರೀಫ್ ವಳವೂರ್, ಸತ್ತಾರ್ ಕಲ್ಲಡ್ಕ, ಹೈದರ್ ಕಾವಳಕಟ್ಟೆ, ಉಪಾಧ್ಯಕ್ಷ ಯೂಸುಫ್ ಆಲಡ್ಕ, ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು.