ಸಜಿಪಮೂಡ: ತಾಲ್ಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ
ಬಂಟ್ವಾಳ:ಮಕ್ಕಳಿಗೆ ಬಾಲ್ಯದಿಂದಲೇ ಗುಣಮಟ್ಟದ ಶಿಕ್ಷಣದ ಜೊತೆಗೆ ಕ್ರೀಡೆ ಮತ್ತಿತರ ಪಠ್ಯೇತರ ಚಟುವಟಿಕೆಯಲ್ಲಿ ತರಬೇತಿ ನೀಡಿದಾಗ ಅವರಲ್ಲಿ ಸಾಧನಾ ಮನೋಭಾವ ಬೆಳೆಯುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಜಿ. ಹೇಳಿದ್ದಾರೆ.
ಇಲ್ಲಿನ ಸಜಿಪಮೂಡ ಗ್ರಾಮದ ಸಕರ್ಾರಿ ಪ್ರೌಢಶಾಲೆ ಮತ್ತು ಸಜಿಪಮುನ್ನೂರು ಗ್ರಾಮದ ಆಲಾಡಿ ಸಕಾರಿ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ತಾಲ್ಲೂಕು ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ ಕಾರ್ಯಕ್ರಮಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.
ಸಕರ್ಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು, ಸಕರ್ಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ, ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಪ್ರಸಾದ್ ರೈ, ಸಜಿಪಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಮುಖ್ಯಶಿಕ್ಷಕ ಗಣೇಶ್, ಮುಖ್ಯಶಿಕ್ಷಕಿ ರೋಹಿಣಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹಮ್ಮದ್ ಕಬೀರ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮೊಹಮ್ಮದ್ ಶರೀಫ್, ಗ್ರಾಮ ಪಂಚಾಯಿತಿ ಸದಸ್ಯರಾದ ಪೌಝಿಯ, ಸರಸ್ವತಿ, ಸುಂದರ ಪೂಜಾರಿ ಆಲಾಡಿ, ದೈಹಿಕ ಶಿಕ್ಷಕಿ ಸುರೇಖಾ ಪ್ರಸಾದ್ ಇದ್ದರು.