ಬಂಟ್ವಾಳ ತಾಲೂಕು ಮಟ್ಟದ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟ
ಬಂಟ್ವಾಳ: ಬಂಟ್ವಾಳ ತಾಲೂಕು ಮಟ್ಟದ ಬಾಲಕ,ಬಾಲಕಿಯರ ತ್ರೋಬಾಲ್ ಪಂದ್ಯಾಟವು ಸಜೀಪಮುನ್ನೂರು ಗ್ರಾಮದ ಅಲಾಡಿ ದ.ಕ.ಜಿ.ಪ.ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ಸಜೀಪಮೂಡ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ಜರಗಿತು.
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಪಂದ್ಯಾಟ ಉದ್ಘಾಟಿಸಿದರು. ಬಂಟ್ವಾಳ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು,ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ,ಬಂಟ್ವಾಳ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಪ್ರಸಾದ್ ರೈ ,ಸಿಆರ್ ಪಿ ಒ ಇಂದಿರಾ, ಸಜೀಪ ಮಾಗಣೆ ತಂತ್ರಿ ಎಂ.ಸುಬ್ರಹ್ಮಣ್ಯ ಭಟ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಣೇಶ್,ಆಲಾಡಿ ಶಾಲಾ ಮುಖ್ಯೋಪಾಧ್ಯಾಯನಿ ರೋಹಿಣಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹಮ್ಮದ್ ಕಬೀರ್ ,ತಾ. ಪಂ. ಮಾಜಿ ಸದಸ್ಯ ಮೊಹಮ್ಮದ್ ಶರೀಫ್, ಗ್ರಾ. ಪಂ. ಸದಸ್ಯರಾದ ಪೌಜಿಯ,ಸರಸ್ವತಿ,ಸುಂದರ ಪೂಜಾರಿ,ಆಲಾಡಿ ಶಾಲಾ ದೈಹಿಕ ಶಿಕ್ಷಕಿ ಸುರೇಖಾ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ದ.ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆ ಸುಭಾಷ್ ನಗರ ಸಜಿಪ ಮೂಡ ಬಾಲಕಿಯರ ವಿಭಾಗದಲ್ಲಿ ಕಕ್ಕೆ ಪದವು ಶಾಲಾ ವಿದ್ಯಾರ್ಥಿಗಳು ಬಹುಮಾನ ಪಡೆದುಕೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟಕ್ಕೆ ಬಾಲಕ, ಬಾಲಕಿಯರ ತ್ರೋಬಾಲ್ ತಂಡವನ್ನು ಆಯ್ಕೆ ಮಾಡಲಾಯಿತು