
ಮೂರೂವರೆ ವರ್ಷದ ಮಗು ಮೇಲೆ ಹಲ್ಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆಯಲ್ಲಿ ನಡೆದಿದೆ. ಮೈ ಹುಷಾರಿಲ್ಲ ಎಂದು ಚಿಕಿತ್ಸೆ ಕೊಡಿಸಲು ತಾಯಿ ಉಡುಪಿಯ ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದಾರೆ. ಸದ್ಯ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿದೆ. ಮಗುವನ್ನು ಪ್ರೇರಿತ್ ಎಂದು ಹೇಳಲಾಗಿದೆ. ಆಸ್ಪತ್ರೆ ತೆಗೆದುಕೊಂಡು ಬಂದ ವೇಳೆ ಮಗುವಿನ ಮೈ ಮೇಲೆ ತೀವ್ರ ತರಹದ ಗಾಯ ಪತ್ತೆಯಾಗಿದೆ.
ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ವಿಚಾರ ತಿಳಿದು ಆಸ್ಪತ್ರೆಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಭೇಟಿ ನೀಡಿದ್ದಾರೆ. ಇಲಾಖೆಯ ಅಧಿಕಾರಿ ದೂರಿನ ಆಧಾರದ ಮೇಲೆ ಅಮಾವಾಸ್ಯೆಬೈಲು ಪೋಲೀಸ್ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇನ್ನು ಮಗುವಿನ ಮೇಲಾದ ಗಾಯದ ಬಗ್ಗೆ ತಾಯಿ ಪೂರ್ಣಪ್ರಿಯಾ ಸ್ಪಷ್ಟ ಮಾಹಿತಿ ನೀಡಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಜ್ಞಾಹೀನ ಸ್ಥಿತಿಯಲ್ಲಿರುವುದರಿಂದ ಮಗುವಿನಿಂದಲೂ ಮಾಹಿತಿ ಕೂಡ ಪಡೆಯಲಾಗುತ್ತಿಲ್ಲ. ಘಟನೆ ಬಗ್ಗೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆಯಲ್ಲಿ ನಡೆದಿದೆ ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
