ಮಾಣಿ ಯಲ್ಲಿ ಜರಗಿದ ಕಲ್ಲಡ್ಕ ವಲಯ ಮಟ್ಟದ ಪ್ರತಿಭಾ ಕಾರಂಜಿ -2024
ಬಂಟ್ವಾಳ : ಶಾಲೆಯಲ್ಲಿ ನಡೆಯುವ ಕಾರ್ಯಕ್ರಮಗಳು ಊರಿಗೊಂದು ಹೆಮ್ಮೆ ಪಡುವಂತಹ ವಿಚಾರವಾಗಿದೆ. ವಿದ್ಯಾರ್ಥಿಗಳಲ್ಲಿ ಕಲಿಕೆಯ ಜೊತೆಗೆ ಪಠ್ಯೇತರವಾಗಿ ಚಟುವಟಿಕೆಗಳನ್ನು ರೂಪಿಸಿದಾಗ ಕಲಿಕೆಯಲ್ಲಿ ಆಸಕ್ತಿ ಮೂಡುತ್ತದೆ ತಮ್ಮಲ್ಲಿರುವ ಪ್ರತಿಭೆಯನ್ನು ಹೊರಹಾಕುವಲು ಇಂತಹ ವೇದಿಕೆಗಳು ಸಹಕಾರಿಯಾಗಿದೆ ಎಂದು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ ಕೆ ಹೇಳಿದರು.
ಅವರು ಶಾಲಾ ಶಿಕ್ಷಣ ಇಲಾಖೆ, ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ, ಶಾಲಾಭಿವೃದ್ದಿ ಸಮಿತಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಾಣಿ ಆಶ್ರಯದಲ್ಲಿ ಬಂಟ್ವಾಳ ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಮಾಣಿ ಯಲ್ಲಿ ಜರಗಿದ ಕಲ್ಲಡ್ಕ ವಲಯ ಮಟ್ಟದ ಪ್ರತಿಭಾ ಕಾರಂಜಿ -2024 ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿರಿಯ ದಾನಿ ಪ್ರಪುಲ್ಲ ರೈ ಕಾರ್ಯಕ್ರಮ ಉದ್ಘಾಟಿಸಿದರು.ಮಾಣಿ ಗ್ರಾಮ ಪಂಚಾಯಿತ್ ಸದಸ್ಯರಾದ ಬಾಲಕೃಷ್ಣ ಆಳ್ವ ಕೊಡಾಜೆ, ಬಂಟ್ವಾಳ ತಾಲೂಕಿನ ಶಿಕ್ಷಣ ಸಂಯೋಜಕಿಯಾದ ಸುಧಾ,ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಸಂತೋಷ ಕುಮಾರ್ ಅವರುಮಾತನಾಡಿದರು.
ಕಲ್ಲಡ್ಕ ವಲಯದ ವಿವಿಧ ಶಾಲೆ ಗಳಿಂದ ಸುಮಾರು 450 ವಿದ್ಯಾರ್ಥಿಗಳು ವಿವಿಧ ಸ್ಪರ್ಧೆ ಯಲ್ಲಿ ಭಾಗವಹಿಸಿದ್ದರು.
ಮಾಣಿ ಬಾಲವಿಕಾಸ ಶಾಲೆ ಪ್ರಥಮ ಸಮಗ್ರ ಪ್ರಶಸ್ತಿ, ಕಲ್ಲಡ್ಕ ಶ್ರೀರಾಮ ಶಾಲೆ ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡವು.
ಮಾಣಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷೆ ಸುಜಾತ, ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್ ಕೊಡಾಜೆ, ಪ್ರೀತಿ ಡಿನ್ನಪಿರೇರಾ, ಸುದೀಪ್ ಶೆಟ್ಟಿ, ನಾರಾಯಣಶೆಟ್ಟಿ, ರಮಣಿ, ಸೀತಾ, ಮಿತ್ರಾಕ್ಷಿ, ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಕುಶಾಲಪ್ಪಗೌಡ, ಉಪಾಧ್ಯಕ್ಷೆ ಆಶಾಲತಾ, ಬಂಟ್ವಾಳ ತಾಲೂಕು ಶಿಕ್ಷಣ ಸಂಯೋಜಕಿಯಾದ ಪ್ರತಿಮಾ, ಮಾಣಿ ಮತ್ತು ಬಾಳ್ತಿಲ ಸಮೂಹ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್, ಕಡೆ ಶಿವಾಲಯ ಸಮೂಹ ಸಂಪನ್ಮೂಲ ವ್ಯಕ್ತಿ ಸುಧಾಕರ್, ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಪುಟ್ಟರಂಗನಾಥ್, ಪ್ರೌಢಶಾಲಾ ಶಿಕ್ಷಕರ ಸಂಘದ ಕೋಶಾಧಿಕಾರಿ ಧನರಾಜ್, ಪಾಟ್ರಕೋಡಿ ಶಾಲೆಯ ಮುಖ್ಯ ಶಿಕ್ಷಕ ಉಮ್ಮರಗಿ ಶರಣಪ್ಪ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್ ಕುಮಾರ್ ವಿಟ್ಲ, ಪ್ರತಿಭಾ ಕಾರಂಜಿ ವಲಯ ನೋಡೆಲ್ ಕಲ್ಲಡ್ಕ ಮಾದರಿ ಶಾಲೆಯ ಪದವೀಧರ ಮುಖ್ಯ ಶಿಕ್ಷಕ ಅಶ್ರಫ್,ಮಾಣಿ ಶಾಲಾ ಮುಖ್ಯ ಶಿಕ್ಷಕಿ ಚಂದ್ರಾವತಿ, ಎಸ್.ಡಿ.ಎಮ್.ಸಿ ಸದಸ್ಯರು ಶಿಕ್ಷಕರು ಉಪಸ್ಥಿತರಿದ್ದರು.
ಶಿಕ್ಷಕಿ ಅಮೃತ ಸ್ವಾಗತಿಸಿ, ಶಿಕ್ಷಕಿ ಶೀಲಾವತಿ ವಂದಿಸಿದರು, ಮಜಿ ಶಾಲಾ ಶಿಕ್ಷಕಿ ಸಂಗೀತ ಶರ್ಮಾ ಕಾರ್ಯಕ್ರಮ ನೀರೂಪಿಸಿದರು.