ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ರಕ್ತದಾನ ಶಿಬಿರ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ, ರೆಡ್ ಕ್ರಾಸ್ ಘಟಕ, ಆಂತರಿಕ ಗುಣಮಟ್ಟ ಭರವಸಾಕೋಶ ಹಾಗೂ ವೆನ್ಲಾಕ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಶನಿವಾರ ನಡೆಯಿತು.

ವೈದ್ಯಾಧಿಕಾರಿ ಡಾ. ಅಂಕಿತ್ ಅವರು ಕಾಲೇಜಿನ ರೆಡ್‌ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳು ಹಾಗೂ ರಕ್ತದಾನ ಶಿಬಿರದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ನೆರವೇರಿಸಿ ರಕ್ತದಾನದ ಮಹತ್ವವನ್ನು ತಿಳಿಸಿದರು.ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರು,ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕರಾದ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ರಕ್ತದಾನವೇ ಮಹಾದಾನ, ಇದು ಜೀವದಾನದ ಪುಣ್ಯದ ಕೆಲಸ ಎಂದು ಹೇಳಿದರು.

ಪಾಂಚಜನ್ಯ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಶಿವಪ್ರಸಾದ್ ಸುಧೆಕಾರ್, ಕಲ್ಲಡ್ಕದ ಆಟೋಚಾಲಕ- ಮಾಲಕ ಸಂಘದ ಅಧ್ಯಕ್ಷ ರವೀಂದ್ರ ಸುಧೆಕಾರ್, ಶ್ರೀರಾಮ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ ಕುಲ್ಯಾರ್,ಕುದ್ರೆಬೆಟ್ಟು ಮಣಿಕಂಠ ಯುವಶಕ್ತಿ ಅಧ್ಯಕ್ಷ ಲೋಕಾನಂದ ಏಳ್ತಿಮಾರ್,ಕಲ್ಲಡ್ಕ ನೇತಾಜಿ ಯುವಕ ಮಂಡಲದ ಕಾರ್ಯದರ್ಶಿ ಅಜಿತ್ ಕುಮಾರ್, ಕಾಲೇಜಿನ ಪ್ರಾಂಶುಪಾಲ ಕೃಷ್ಣ ಪ್ರಸಾದ್ ಕಾಯರ್ ಕಟ್ಟೆ, ರೆಡ್ ಕ್ರಾಸ್ ಘಟಕದ ನಿರ್ದೇಶಕಿ ಅಶ್ವಿತಾ ವೇದಿಕೆಯಲ್ಲಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಯತಿರಾಜ್ ಪೆರಾಜೆ ಸ್ವಾಗತಿಸಿ, ರೆಡ್ ಕ್ರಾಸ್ ಘಟಕದ ನಿರ್ದೇಶಕಿ ಅಶ್ವಿತಾ ವಂದಿಸಿದರು, ವಿದ್ಯಾರ್ಥಿ ಯತೀಶ್ ಕಾರ್ಯಕ್ರಮ ನಿರ್ವಹಿಸಿದರು. ಕು.ಮನ್ವಿತಾ ಪ್ರಾರ್ಥಿಸಿದರು.