ಅಮ್ಟಾಡಿ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆ
ಬಂಟ್ವಾಳ: ಅಮ್ಟಾಡಿ ಹಾಲು ಉತ್ಪಾದಕರ ಸಂಘದ ವಾರ್ಷಿಕ ಮಹಾಸಭೆಯು ಬಂಟ್ವಾಳ ಸಮೀಪದ ಅಜೆಕಲ ಭಂಡಾರಿ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷರಾದ ಉದಯಕುಮಾರ್ ರವರು ಅಧ್ಯಕ್ಷತೆ ವಹಿಸಿ ಸಂಘದ ಅಭಿವೃದ್ಧಿ ಹಾಗೂ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು. ವಿಸ್ತರಣಾಧಿಕಾರಿ ಪ್ರಫುಲ್ಲ,ನಿರ್ದೇಶಕರುಗಳು ಉಪಸ್ಥಿತರಿದ್ದರು.ಹಾಲು ಒಕ್ಕೂಟದ ವ್ಯವಸ್ಥಾಪಕರಾದ ಕೇಶವ ಸುರುಳಿ ಯವರು ಒಕ್ಕೂಟದಿಂದ ಸಿಗುವ ಸವಲತ್ತುಗಳ ಬಗ್ಗೆ ವಿವರಿಸಿದರು.
ನಿರ್ದೇಶಕರಾದ ಸಿರಿಲ್ ಅಲ್ಮೇಡ ರವರು ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಸತೀಶ್ ರವರು ಸಂಘದ ವರದಿ ವಾಚಿಸಿದರು.ಸಂಘದ ಉಪಾಧ್ಯಕ್ಷರಾದ ಪ್ರಭಾಕರ್ ಶೆಟ್ಟಿ ವಂದಿಸಿದರು.