ಬಂಟ್ವಾಳ: ಪ್ರಧಾನಿ ಕಾರ್ಯಾಲಯದಿಂದ ಗುರುತಿಸಲ್ಪಟ್ಟ ಪೆರುವಾಯಿ ಪಂಚಾಯತ್ ಅಧ್ಯಕ್ಷೆಯ ವಿರುದ್ಧ ಅವ್ಯವಹಾರ ಆರೋಪ

ಪ್ರಧಾನಿ ಕಾರ್ಯಾಲಯದಿಂದ ಗುರುತಿಸಲ್ಪಟ್ಟ ಪಂಚಾಯತ್ ಅಧ್ಯಕ್ಷೆಯ ವಿರುದ್ಧ ಅವ್ಯವಹಾರ ಆರೋಪ ಕೇಳಿ ಬಂದಿದೆ. ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ ಸಭೆಯಲ್ಲಿ ಈ ಬಗ್ಗೆ ಕೋಲಾಹಲ ಸೃಷ್ಟಿಯಾಗಿದೆ. ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಪಡೆದಿದ್ದ ಪಂಚಾಯತ್ ಅಧ್ಯಕ್ಷೆ ವಿರುದ್ಧ ಅವ್ಯವಹಾರ ಆರೋಪ ಕೇಳಿ ಬಂದಿದೆ. ದೆಹಲಿಯ ಸ್ವಾತಂತ್ರ್ಯೋತ್ಸವ ಪ್ರಯಾಣ ಖರ್ಚಿನಲ್ಲಿ ಅವ್ಯವಹಾರ ನಡೆದಿದೆ ಎಂದು ಗ್ರಾಮಸ್ಥರ ಕಿಡಿಕಾರಿದ್ದಾರೆ.
ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷೆ ನಫಿಸಾ ವಿರುದ್ಧ ಅವ್ಯವಹಾರ ಆರೋಪ ಕೇಳಿ ಬಂದಿರುವುದು ಅಧ್ಯಕ್ಷೆಯ ದೆಹಲಿ ಟೂರ್ ಲೆಕ್ಕದ ವಿಚಾರದಲ್ಲಿ ಭಾರೀ ಚರ್ಚೆ ಕಾರಣವಾಗಿದೆ. ಇನ್ನು ಈ ಆರೋಪಕ್ಕೆ ಪಂಚಾಯತ್ ಅಧ್ಯಕ್ಷೆ ನಫೀಸಾ ಕೆಂಡಾಮಂಡಲಗೊಂಡಿದ್ದಾರೆ. ಸ್ವಾತಂತ್ರ್ಯೋತ್ಸವಕ್ಕೆ ದೆಹಲಿಯಿಂದ ಆಹ್ವಾನ ಸ್ವೀಕರಿಸಿದ್ದರು. ದೆಹಲಿಗೆ ತೆರಳಲು ಪಂಚಾಯತ್ ಹಣ ಖರ್ಚು ಮಾಡಿದ್ದಾರೆ ಎಂದು ಕೆಲ ಗ್ರಾಮಸ್ಥರ ಆರೋಪ ಮಾಡಿದ್ದಾರೆ.
ಇನ್ನು ಈ ಖರ್ಚನ್ನ ಸರ್ಕಾರ ಭರಿಸಲಿದ್ದು, ಜಿಲ್ಲಾ ಪಂಚಾಯತ್‌ನಿಂದ ಮರುಪಾವತಿಯಾಗಲಿದೆ ಎಂದು ಪಂಚಾಯತ್ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಸಭೆಯಲ್ಲಿ ಹಂಚಲಾಗಿದ್ದ ಪಂಚಾಯತ್ ಖರ್ಚು ವೆಚ್ಚದ ಪತ್ರದಲ್ಲಿ ಹಲವು ಕ್ರಮ ಸಂಖ್ಯೆ ಮಾಯವಾಗಿದೆ ಎಂದು ಹೇಳಲಾಗಿದೆ. ಗ್ರಾಮಸ್ಥರು ಕೇಳಿದ ಪ್ರಶ್ನೆಗೆ ಅಧಿಕಾರಿಗಳು ಸಮರ್ಪಕ ಉತ್ತರ ನೀಡದ ಕಾರಣ ಸಭೆಯಲ್ಲಿ ಜಟಾಪಟಿ ಉಂಟಾಗಿದೆ ಎಂದು ಹೇಳಿದ್ದಾರೆ.
ಇನ್ನು ಈ ವಿಚಾರವಾಗಿ ಅಧ್ಯಕ್ಷೆ ನಫೀಸಾ ಸಭೆಯಲ್ಲಿ ಉಗ್ರರೂಪ ಪ್ರದರ್ಶನ ಮಾಡಿದ್ದಾರೆ. ಒಬ್ಬ ಹೆಣ್ಣು ಅನ್ನೋ ಕಾರಣಕ್ಕೆ ನನ್ನ ತೇಜೋವಧೆ ಮಾಡಲಾಗುತ್ತಿದೆ. ಪಂಚಾಯತ್‌ನಲ್ಲಿ ಒಂದು ರೂಪಾಯಿ ಅವ್ಯವಹಾರ ಸಾಬೀತಾದರೂ ರಾಜೀನಾಮೆ ನೀಡುವೆ ಎಂದು ಹೇಳಿದ್ದಾರೆ.