ಎಕ್ಕಾರು ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಅದಿತಿ ರಾಜ್ಯ ಮಟ್ಟಕ್ಕೆ ಆಯ್ಕೆ
ಬಜಪೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಇದರ ವತಿಯಿಂದ ಜಿಲ್ಲಾ ಮಟ್ಟದ ಜಂಪ್ ರೋಪ್ ಪಂದ್ಯಾಟವು ಕಾಂಚನ ಪ್ರೌಢಶಾಲೆ ಉಪ್ಪಿನಂಗಡಿ ಪುತ್ತೂರು ತಾಲೂಕಿನಲ್ಲಿ ನಡೆಯಿತು.
ತಿಲಕ್ ಪೂಜಾರಿ ಹಾಗೂ ಅಕ್ಷಯ ರವರ ಸುಪುತ್ರಿಯಾದ ಅದಿತಿ ಸರಕಾರಿ ಪ್ರೌಢಶಾಲೆ ಬಡಗ ಎಕ್ಕಾರು ಇಲ್ಲಿನ ವಿದ್ಯಾರ್ಥಿನಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.ಇವಳಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ವಿದ್ಯಾಲತ ತರಬೇತಿ ನೀಡಿರುತ್ತಾರೆ.