ಬಂಟ್ವಾಳ: ರಕ್ತೇಶ್ವರಿ ದೇವಸ್ಥಾನದ ಬಳಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿದ ಹಿಂದು ಸಂಘಟನೆ ಕಾರ್ಯಕರ್ತರು
ಮಂಗಳೂರು: ಇಂದು ಬಿ.ಸಿ.ರೋಡ್ ಚಲೋಗೆ ಭಜರಂಗದಳ ಕರೆ ನೀಡಿತ್ತು. ವಿಎಚ್ ಪಿ ಮುಖಂಡ ಶರಣ್ ಪಂಪ್ ವೆಲ್ಗೆ ಮುಸ್ಲಿಂ ಮುಖಂಡರ ಸವಾಲು ಹಿನ್ನೆಲೆ ಈ ಚಲೋಗೆ ಕರೆ ನೀಡಲಾಗಿತ್ತು. ಇದೀಗ ಮುಸ್ಲಿಂ ಮುಖಂಡರ ಸವಾಲನ್ನು ಸ್ವೀಕರಿಸಿದ ಸಂಘಟನೆ, ಭಾರೀ ಸಂಖ್ಯೆಯಲ್ಲಿ ಹಿಂದು ಸಂಘಟನೆ ಕಾರ್ಯಕರ್ತರು ಬಿ.ಸಿ.ರೋಡ್ ನ ರಕ್ತೇಶ್ವರಿ ದೇವಸ್ಥಾನದ ಬಳಿ ಜಮಾಯಿಸಿದ್ದಾರೆ.
ಇನ್ನು ಬಿ.ಸಿ.ರೋಡ್ ಗೆ ಆಗಮಿಸಲಿರೋ ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ. ಭಾರೀ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ. ಕೆ.ಎಸ್.ಆರ್.ಪಿ ತುಕಡಿಗಳು, ಆರ್ಮ್ ರಿಸರ್ವ್ ಫೋರ್ಸ್ ಸೇರಿದಂತೆ ವಿವಿಧ ತುಕಡಿಗಳ ಮುಕ್ಕಾಂ. ಸ್ಥಳದಲ್ಲೇ ಬೀಡುಬಿಟ್ಟ ಹಿರಿಯ ಪೊಲೀಸ್ ಅಧಿಕಾರಿಗಳು. ಎಸ್ಪಿ ಯತೀಶ್ ನೇತೃತ್ವದಲ್ಲಿ ಬಂದೋಬಸ್ತ್ ಮಾಡಲಾಗಿದೆ.