ಉಡುಪಿ: ಅನುಮಾನಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು
ಅನುಮಾನಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಡಿಯ ಫಿಶರೀಸ್ ಏರಿಯಾದಲ್ಲಿ ನಡೆದಿದೆ.
ಅನುಮಾನಾಸ್ಪದವಾಗಿ ತಿರುಗುತ್ತಿದ್ದ ವ್ಯಕ್ತಿಯು ಚಡ್ಡಿ ಮತ್ತು ಬನಿಯನ್ ಧರಿಸಿದ್ದನು. ಈ ಶಂಕಿತ ಕಳ್ಳನ ಅವತಾರರನ್ನು ಕಂಡು ಸ್ಥಳೀಯರು ಭಯಭೀತರಾಗಿದ್ದರು.
ಚಡ್ಡಿ ಬನಿಯನ್ ಗ್ಯಾಂಗ್ ಗೆ ಸೇರಿದ ವ್ಯಕ್ತಿ ಎನ್ನುವ ಶಂಕೆ ವ್ಯಕ್ತವಾಗುತ್ತಿದ್ದಂತೆ ಸ್ಥಳೀಯರು ಕಳ್ಳನನ್ನು ಹಿಡಿದು ಹೆಡೆಮುರಿ ಕಟ್ಟಿ ಪೊಲೀಸ್ ರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದು, ಇದಕ್ಕೆ ಸಂಬಂಧ ಪಟ್ಟ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.