ಮತ್ತೊಂದು ಜೀವ ಉಳಿಸಲು ಯಕೃತ್ ದಾನ ಮಾಡಲು ಹೋಗಿ ತನ್ನ ಪ್ರಾಣ ಕಳೆದುಕೊಂಡು ಉಡುಪಿಯ ಮಹಿಳೆ
ಕುಂದಾಪುರ: ಉಡುಪಿಯಲ್ಲಿ ಒಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದೆ. ಮತ್ತೊಂದು ಜೀವವನ್ನು ಉಳಿಸಲು ಹೋಗಿ ತನ್ನ ಪ್ರಾಣವನ್ನೇ ನೀಡಿದ ಘಟನೆ ಉಡುಪಿಯಲ್ಲಿ ನಡೆದಿದೆ. ಕುಂದಾಪುರ ತಾಲೂಕಿನ ಕೊಟೇಶ್ವರದ ಅರ್ಚನಾ ಕಾಮತ್ (34) ಎಂಬುವವರು 69 ವರ್ಷದ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಕಸಿಗೆ ದಾನಿಯಾಗಲು ಬಯಸಿದ್ದರು.
ಅರ್ಚನಾ ಕಾಮತ್ ಯಕೃತ್ ದಾನ ಮಾಡಲು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಸೋಂಕಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದಾರೆ. ಸದಾ ಸಮಾಜಮುಖಿ ಚಿಂತನೆಯೊಂದಿಗೆ ಅರ್ಚನಾ ಕಾಮತ್ ಸಕ್ರಿಯವಾಗಿದ್ದವರು. ಅರ್ಚನಾ ಕಾಮತ್ ಅವರ ಅಕಾಲಿಕ ನಿಧನದಿಂದ ಅವರ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗಿದೆ. ಮೃತ ಅರ್ಚನಾ ಕಾಮತ್ ಪತಿ ಸಿಎ ಚೇತನ ಕಾಮತ್, 4 ವರ್ಷದ ಗಂಡು ಮಗು, ಹಾಗೂ ತಂದೆ, ತಾಯಿಯನ್ನು ಅಗಲಿದ್ದಾರೆ