ಬಂಟ್ವಾಳದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ
ಬಂಟ್ವಾಳ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಸಮೂಹ ಸಂಪನ್ಮೂಲ ಕೇಂದ್ರ ಬಂಟ್ವಾಳ ನಗರ ವಲಯ ಮತ್ತು ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾಗಿರಿ ಬಂಟ್ವಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ೨೦೨೪-೨೫ ರ ಸಾಲಿನ ಬಂಟ್ವಾಳ ನಗರ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿನಡೆಯಿತು.
ಸಭಾಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಎಸ್.ವಿ.ಎಸ್ ಸಮೂಹ ಸಂಸ್ಥೆಗಳ ಸಂಚಾಲಕಿ ಕೆ. ರೇಖಾ ಶೆಣೈಯವರು ಅಧ್ಯಕ್ಷತೆ ವಹಿಸಿದರು. ಶಿಕ್ಷಣ ಸಂಯೋಜಕರು ಮತ್ತು ತಾಲೂಕು ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಪ್ರತಿಮಾ ವೈ.ವಿ.,ಪ್ರತಿಭಾ ಕಾರಂಜಿ ಸ್ಫರ್ಧೆಯನ್ನು ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ಮಕ್ಕಳ ಸೂಕ್ತ ಪ್ರತಿಭೆಗಳಿಗೆ ಅವಕಾಶವನ್ನು ಒದಗಿಸುವ ಒಂದು ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ಬಂಟ್ವಾಳ ನಗರ ವಲಯ ಮಟ್ಟದ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಸುರೇಖಾ ಯಾಳವಾರ,ವಲಯ ಸಂಪನ್ಮೂಲ ವ್ಯಕ್ತಿ ಸತೀಶ್ ರಾವ್,ಮುಖ್ಯೋಪಾಧ್ಯಾಯರಾದ ಪ್ರೇಮ ಕೆ.ಕೆ, ನೋಣಯ್ಯ, ಹರಿಪ್ರಸಾದ್, ಸತೀಶ್ ಬಂಗೇರ ಮತ್ತು ಹೇಮಲತಾ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದಲ್ಲಿ ಗುಂಪು ಸ್ಫರ್ಧೆಗಳ ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಸತೀಶ್ ಬಂಗೇರ ಸ್ವಾಗತಿಸಿದರು.
ಶಾಲೆಯ ಶಿಕ್ಷಕರಾದ ಪ್ರದೀಪ್ ನಾಯಕ್ ಮತ್ತು ರೇಖಾ ನಾಗೇಶ್ ಅವರು ಕಾರ್ಯಕ್ರಮ ನಿರೂಪಿಸಿದರು.