ಶ್ರೀರಾಮ ಮಹಾವಿದ್ಯಾಲಯದಲ್ಲಿ ‘ಹಿಂದಿ ದಿವಸ್’ ಆಚರಣೆ
ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ “ಹಿಂದಿ ದಿವಸ್ “ಕಾರ್ಯಕ್ರಮವನ್ನು ಆಚರಿಸಲಾಯಿತು.

ಮಂಗಳಗಂಗೋತ್ರಿ ಯೂನಿವರ್ಸಿಟಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕಿ ಡಾ.ರಶ್ಮಿ ಬಿ.ವಿ ಅವರು ದೀಪ ಪ್ರಜ್ವಲನಗೈದು ಕಾರ್ಯಕ್ರಮವನ್ನು ಉದ್ಘಾಟಿಸಿ ಹಿಂದಿ ಭಾಷೆಯ ಮಹತ್ವ, ಕಲಿಕೆ ಮತ್ತು ಉದ್ಯೋಗ ಅವಕಾಶಗಳ ಕುರಿತು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಪ್ರಸಾದ್ ಕಾಯರ್ ಕಟ್ಟೆ ವಹಿಸಿದ್ದರು. ಹಿಂದಿ ಭಾಷಾ ಉಪನ್ಯಾಸಕಿ ವಿಭಾನಿ ಮಾತಾಜಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಐಶ್ವರ್ಯಾ ಸ್ವಾಗತಿಸಿ, ಕೀರ್ತನಾ ವಂದಿಸಿದಳು, ದಿವ್ಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.