ಮಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗ ಕಿನ್ನಿಗೋಳಿ ಪಟ್ಟಣ ಪಂಚಾಯತ್ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಕಿನ್ನಿಗೋಳಿ ಪಟ್ಟಣ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆಸಲಾಗಿದೆ. ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಟ್ರಾಪ್ ಮಾಡಲಾಗಿದೆ. ಜೂನಿಯರ್ ಇಂಜಿನಿಯರ್ ಮತ್ತು ಮುಖ್ಯಾಧಿಕಾರಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಿನ್ನಿಗೋಳಿ ಪಟ್ಟಣ ಪಂಚಾಯತ್‌ನ ಜೂನಿಯರ್ ಇಂಜಿನಿಯರ್ ನಾಗರಾಜು ಮತ್ತು ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಎಂದು ಹೇಳಲಾಗಿದೆ.
ಅಧಿಕಾರಿಗಳು ಕೆರೆ ಅಭಿವೃದ್ಧಿ ಕಾಮಗಾರಿಯ ಬಿಲ್ ಪಾಸ್ ಮಾಡಲು ಗುತ್ತಿಗೆದಾರರಿಂದ ಲಂಚದ ಬೇಡಿಕೆ ಇಟ್ಟಿದ್ದಾರೆ. ಜೂನಿಯರ್ ಇಂಜಿನಿಯರ್ ನಾಗರಾಜು 30 ಸಾವಿರ ಮತ್ತು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಯಿಂದ 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಿದ್ದಾರೆ.
9,77.154 ರೂಪಾಯಿ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ ಇಟ್ಟಿದ್ದಾರೆ. ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿದ್ದಿದ್ದಾರೆ. ಲೋಕಾಯುಕ್ತ ಎಸ್ ಪಿ, ಎಂ.ಎ ನಟರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.