ವಿದ್ಯಾರ್ಥಿಗಳ ವಿಜ್ಞಾನ ನಾಟಕ ಸ್ಪರ್ಧೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕೊಡಿಯಾಲ್ ಬೈಲ್ ಮಂಗಳೂರು, ಹಾಗೂ ಸುದಾನ ವಸತಿ ಶಾಲೆ ಪುತ್ತೂರು ಇವರ ಸಹಯೋಗದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಮೈಸೂರು ವಿಭಾಗ ಮಟ್ಟಕ್ಕೆ ಬಂಟ್ವಾಳ ಎಸ್.ವಿ.ಎಸ್.ದೇವಳ ಆಂಗ್ಲ ಮಾಧ್ಯಮ ಶಾಲೆ ಆಯ್ಕೆಯಾಗಿದೆ ಎಂದು ಶಾಲ ಪ್ರಕಟಣೆ ತಿಳಿಸಿದೆ.

ಈ ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಿ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳಿಗೆ ಹಾಗೂ ತರಬೇತುಗೊಳಿಸಿದ ಶಿಕ್ಷಕರಿಗೆ ಶಾಲಾ ಆಡಳಿತ ಮಂಡಳಿ ಮತ್ತು ಮುಖ್ಯೋಪಾದ್ಯಾಯಿನಿಯರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ