ಬಂಟ್ವಾಳ ತಾಲೂಕು ಮಟ್ಟದ ಹ್ಯಾಂಡ್ ಬಾಲ್ ಕ್ರೀಡಾಕೂಟ
ಬಂಟ್ವಾಳ: ಮಕ್ಕಳ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಕ್ರೀಡೆಯು ಪ್ರಮುಖ ಪಾತ್ರವಹಿಸುತ್ತದೆ. ಕಲಿಕೆಯ ಜೊತೆಗೆ ಕ್ರೀಡೆಯು ಅತೀ ಮುಖ್ಯ ಎಂದು ಬಂಟ್ವಾಳ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಮಂಜುನಾಥನ್ ಎಂ.ಜಿ. ಹೇಳಿದರು.
ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ಸಂಯುಕ್ತಾಶ್ರಯದಲ್ಲಿ ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ
ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಹ್ಯಾಂಡ್ ಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಯೋಗ ವರ್ಧನ್ ಡಿ.ಎಂ. ಅಧ್ಯಕ್ಷತೆ ವಹಿಸಿದ್ದರು.
ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇಂದ್ರ ರೈ ,ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷ ಜಯರಾಮ,ತಾಲೂಕು ದೈಹಿಕ ಪರಿವೀಕ್ಷಣಾಧಿಕಾರಿ ಶಿವಪ್ರಸಾದ್ ರೈ ಕೆ. ,ಮೊಂಟೆಪದವು ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧಾಯರಾದ ಸಂತೋಷ್ ಕುಮಾರ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಹರಿಪ್ರಸಾದ್, , ಸ್ವಾಗತಿಸಿದರು, ಬಿ.ಆರ್.ಎಂ.ಪಿ. ಶಾಲೆಯ ಶಿಕ್ಷಕಿ ಚಂದ್ರಿಕಾ ಕಾರ್ಯಕ್ರಮ ನಿರೂಪಿಸಿದರು.ಶ್ರೀ ವೆಂಕಟರಮಣಸ್ವಾಮಿ ಸಮೂಹ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಮಹೇಶ್ ಶೆಟ್ಟಿ ವಂದಿಸಿದರು.
ಈ ಪಂದ್ಯಾಟದಲ್ಲಿ ತಾಲೂಕಿನ ವಿವಿಧ ಶಾಲೆಗಳಿಂದ ೧೫ ಕ್ರೀಡಾ ತಂಡಗಳು ಭಾಗವಹಿಸಿದ್ದವು.
ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮಸ್ಥಾನವನ್ನು ಹಾಗೂ ದೇವಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟೂರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.
ಪ್ರಾಥಮಿಕ ಬಾಲಕರ ವಿಭಾಗದಲ್ಲಿ ದೇವಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟೂರು ಪ್ರಥಮ ಹಾಗೂ ಮೊಂಟೆಪದವು ಸರಕಾರಿ ಪ್ರೌಢಶಾಲೆ ದ್ವಿತೀಯ ಸ್ಥಾನವನ್ನು ಪಡೆಯಿತು. ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ಬಂಟ್ವಾಳ ವಿದ್ಯಾಗಿರಿಯ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯು ಪ್ರಥಮ ಹಾಗೂ ದೇವಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟೂರು ದ್ವಿತೀಯ ಸ್ಥಾನವನ್ನು ಪಡೆಯಿತು. ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ ಬಂಟ್ವಾಳ ವಿದ್ಯಾಗಿರಿಯ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ದೇವಮಾತಾ ಆಂಗ್ಲ ಮಾಧ್ಯಮ ಶಾಲೆ ಅಮ್ಟೂರು ಪಡೆದುಕೊಂಡಿತು.
ವಿಜೇತ ಮಕ್ಕಳಿಗೆ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.