Published On: Sat, Sep 21st, 2024

ಎಸ್ ವಿ ಎಸ್ ಕಾಲೇಜಿನಲ್ಲಿ ವಿಶ್ವ ಓಝೋನ್ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ; ಮನುಷ್ಯನ ಆಧುನಿಕ ಜೀವನ ಶೈಲಿಯಿಂದಾಗಿ ಪರಿಸರ ಮಾಲಿನ್ಯ ಉಂಟಾಗುತಿದ್ದು ಇದರಿಂದಾಗಿ ಓಝೋನ್ ಪದರ ಕ್ಷೀಣಿಸುತ್ತದೆ ಎಂದು ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಯೋಗ ವರ್ಧನ್ ಡಿ.ಎಮ್ ರವರು ಹೇಳಿದರು. 

ಕಾಲೇಜಿನ ವಿಜ್ಞಾನ ವೇದಿಕೆ ಹಾಗು ಐ.ಕ್ಯೂ.ಎ.ಸಿ ಸಹಯೋಗದಲ್ಲಿ ಕಾಲೇಜಿನಲ್ಲಿ ನಡೆದ ವಿಶ್ವ ಓಝೋನ್ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕುರಿತಾಗಿ ಈ ದಿನವನ್ನು ಆಚರಿಸಲಾಗುತ್ತಿದೆ ಎಂದರು.

 ಓಝೋನ್ ಪದರ ಭೂಮಿಯನ್ನು ಸೂರ್ಯನ ಶಾಖದಿಂದ ರಕ್ಷಿಸುವುದರ ಜೊತೆಗೆ ಭೂಮಂಡಲದಲ್ಲಿರುವ ಜೀವ ಸಂಕುಲವನ್ನು ರಕ್ಷಿಸುವ ಪದರವಾಗಿ ಕೆಲಸ ಮಾಡುತ್ತಿದೆ. ಹಾಗಾಗಿ ಎಲ್ಲರೂ ಹೆಚ್ಚು ಗಿಡಮರಗಳನ್ನು ಬೆಳೆಸುವುದರ ಮೂಲಕ ಓಝೋನ್ ಪದರವನ್ನು ಸಂರಕ್ಷಣೆ ಮಾಡುವಂತೆ  ಕರೆ ನೀಡಿದರು. 

ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿನಾಯಕ ಕೆ. ಎಸ್ ಸ್ವಾಗತಿಸಿ, ಗಣಿತ ಶಾಸ್ತ್ರ ವಿಭಾಗದ  ಮುಖ್ಯಸ್ಥರಾದ ಕು|ಶ್ರೀದೇವಿ ಇವರು ವಂದಿಸಿದರು, ಕು| ಹೇಮಲತಾ ಕಾರ್ಯಕ್ರಮ ನಿರೂಪಿಸಿದರು. ಓಝೋನ್ ದಿನದ ಅಂಗವಾಗಿ ನಡೆದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ವೆಂಕಟರಮಣ ಸ್ವಾಮಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಸುದರ್ಶನ್ ಬಿ ಹಾಗು ಕಾಲೇಜಿನ ವಿಜ್ಞಾನ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter