ಕಳವು ಪ್ರಕರಣ: ತಲೆಮರೆಸಿದ್ದ ಹಳೇ ಆರೋಪಿಯ ಸೆರೆ
ಬಂಟ್ವಾಳ: ಕಳ್ಳತನ ಪ್ರಕರಣದಲ್ಲಿ ಜಾಮೀನು ಪಡೆದು ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳನೋರ್ವನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಸಜೀಪ ಗ್ರಾಮದ ಪೆರುವ ನಿವಾಸಿ ಉಮ್ಮರ್ ಫಾರೂಕ್ ಬಂಧಿತ ಆರೋಪಿಯಾಗಿದ್ದಾನೆ.
2020 ರಲ್ಲಿಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣವೊಂದರಲ್ಲಿ ಈತ ಆರೋಪಿಯಾಗಿದ್ದು, ಜೈಲು ಪಾಲಾಗಿದ್ದ.ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರು ಖಚಿತ ಮಾಹಿತಿಯಾಧರದಲ್ಲಿ
ಇನ್ಸ್ ಪೆಕ್ಟರ್ ಆನಂತಪದ್ಮನಾಭ ನೇತೃತ್ವದಲ್ಲಿ ಬಿ.ಸಿ.ರೋಡಿನಲ್ಲಿ ಕಾರ್ಯಾಚರಣೆ ನಡೆಸಿ ಉಮ್ಮರ್ ಫಾರುಕ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈತನ ಮೇಲೆ ಬಂಟ್ವಾಳ ಗ್ರಾಮಾಂತರ, ವಿಟ್ಲ,ಉಪ್ಪಿನಂಗಡಿ, ಕಡಬ, ಕೋಣಾಜೆ, ಬಜಪೆ,ಬರ್ಕೆ,ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆ ಸೇರಿದಂತೆ ಒಟ್ಟು 22 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.