Published On: Mon, Sep 23rd, 2024

ಮಂಚಿಯಲ್ಲಿ23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

ಬಂಟ್ವಾಳ:ದ ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ಘಟಕವು
ಹಿರಿಯ ವಿದ್ಯಾರ್ಥಿ ಸಂಘ – ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು  ಇದರ ಸಹಯೋಗದಲ್ಲಿ
23 ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ – 2024  ಆಯೋಜಿಸುವ ಕುರಿತು ಪೂರ್ವಭಾವಿ ಸಭೆಯು ಭಾನುವಾರ ಮಂಚಿ ಕೊಳ್ನಾಡು ಪ್ರೌಢಶಾಲಾ ಸಭಾಂಗಣದಲ್ಲಿ ನಡೆಯಿತು.

ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ತು ಘಟಕದ ಗೌರವ ಕಾರ್ಯದರ್ಶಿಯಾದ  ವಿ ಸುಬ್ರಹ್ಮಣ್ಯ ಭಟ್ ಮಾತನಾಡಿ, “ಸಾಹಿತ್ಯ ಸಮ್ಮೇಳನವೆಂದರೆ ಅದು ಅವಿಸ್ಮರಣೀಯವಾಗಿ ಉಳಿಯುವಂಥದ್ದಾಗಿದೆ.  ಎಲ್ಲೆಡೆಯ ಸಾಹಿತ್ಯ ಪ್ರತಿಭೆಗಳಿಗೆ ಅವಕಾಶವೆಂಬ ವೇದಿಕೆ ಸಿದ್ಧವಾಗಬೇಕಾಗಿದೆ. ಮಂಚಿಯಂತಹ ಗ್ರಾಮೀಣ ಪ್ರದೇಶದಲ್ಲಿ 23ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜನೆಗೆ ಮನಸು ಮಾಡಿರುವ ಹಿರಿಯ  ವಿದ್ಯಾರ್ಥಿ ಸಂಘ ಹಾಗೂ ಇಲ್ಲಿನ ನಾಗರಿಕರು ಅಭಿನಂದನಾರ್ಹರು ಎಂದರು.


23 ನೇ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ಸಿಗೆ ಸಮಿತಿಯನ್ನು ರಚನೆ ಮಾಡಲಾಯಿತು. ಸಮಿತಿಯ ಕಾರ್ಯಾಧ್ಯಕ್ಷರಾಗಿ ಬೀಡಿ ಉದ್ಯಮಿ ಲಯನ್  ಸುಲೈಮಾನ್ ನಾರ್ಶ ಮೈದಾನ, ಅಧ್ಯಕ್ಷರಾಗಿ ಲಯನ್ ಸತೀಶ್ ಆಳ್ವ ಬಾಳಿಕೆ, ಪ್ರಧಾನ ಕಾರ್ಯದರ್ಶಿಯಾಗಿ ಉಪನ್ಯಾಸಕ  ಎಂ.ಡಿ ಮಂಚಿ, ಕೋಶಾಧಿಕಾರಿಯಾಗಿ ಹಾಜಿ ಸುಲೈಮಾನ್ ಜಿ ಸುರಿಬೈಲು ಇವರನ್ನು ಆಯ್ಕೆ ಮಾಡಲಾಯಿತು. ಉಪಾಧ್ಯಕ್ಷ, ಜೊತೆ ಕಾರ್ಯದರ್ಶಿ ಹಾಗೂ ಇನ್ನಿತರ ಸಮಿತಿಗಳಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.


ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಅಧ್ಯಕ್ಷರಾದ ವಿಶ್ವನಾಥ್ ಬಂಟ್ವಾಳ,  ಕೋಶಾಧಿಕಾರಿ ಡಿ. ಬಿ.ಅಬ್ದುಲ್ ರಹಿಮಾನ್, ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷ ಅಶ್ರಫ್, ಮಂಚಿ ಗ್ರಾಮ ಪಂಚಾಯತ್ ಅಧ್ಯಕ್ಷ ಎಂ. ಜಿ.ಇಬ್ರಾಹಿಂ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಾಲಕೃಷ್ಣ ಸೆರ್ಕಳ,  ಕೊಳ್ನಾಡು ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ   ಸುಶೀಲ ವಿಟ್ಲ ಉಪಸ್ಥಿತರಿದ್ದರು.


 ಸರಕಾರಿ ಪ್ರೌಢಶಾಲೆ ಮಂಚಿ – ಕೊಳ್ನಾಡು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಲ. ರಾಮ್ ಪ್ರಸಾದ್ ರೈ ತಿರುವಾಜೆ ಸ್ವಾಗತಿಸಿದರು.  ಉಪನ್ಯಾಸಕರಾದ ಎಂ ಡಿ ಮಂಚಿ ಪ್ಪ್ರಸ್ತಾವನೆಗೈದರು. ನ್ಯಾಯವಾದಿ ರವೀಂದ್ರ ಕುಕ್ಕಾಜೆ ವಂದಿಸಿದರು.  ಬಂಟ್ವಾಳ ತಾಲೂಕು ಸಾಹಿತ್ಯ ಪರಿಷತ್ ಘಟಕದ ಗೌರವ ಕಾರ್ಯದರ್ಶಿ ಲ. ರಮಾನಂದ ನೂಜಿಪ್ಪಾಡಿ ಕಾರ್ಯಕ್ರಮ ನಿರ್ವಹಿಸಿದರು. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter