ಪಾಣೆಮಂಗಳೂರು: ಮಹಿಳಾ ಕಾಂಗ್ರೆಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಬಂಟ್ವಾಳ: ಆಖಿಲ ಭಾರತ ಮಹಿಳಾ ಕಾಂಗ್ರೆಸ್ ಇದರ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ನಿದರ್ಶನದಂತೆ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಸದಸ್ಯತ್ವ ಅಭಿಯಾನಕ್ಕೆ ಮಾಜಿ ಸಚಿವ ರಮಾನಾಥ ರೈ ಅವರನಿವಾಸದಲ್ಲಿ ಚಾಲನೆ ನೀಡಲಾಯಿತು.

ಮಾಜಿ ಸಚಿವ ರಮಾನಾಥ ರೈ ಅವರು ಅಬನಿಯಾನ ಉದ್ಘಾಟಿಸಿ ಮಾತನಾಡಿ,ಮಹಿಳೆಯರಿಗೆ ಸ್ವಾಭಿಮಾನದ ಬದುಕು ಕಟ್ಟಿಕೊಟ್ಟ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮಹಿಳೆಯರನ್ನು ಸದಸ್ಯರನ್ನಾಗಿಸುವ ನಿಟ್ಟಿನಲ್ಲಿ ಪ್ರಯತ್ನಿಸಬೇಕೆಂದರು.
ಪಾಣೆಮಂಗಳೂರುಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ವಿ.ಪೂಜಾರಿ ರವರ ಅಧ್ಯಕ್ಷತೆ ವಹಿಸಿದ್ದರು.
ರಮಾನಾಥ ರೈ ಅವರ ಪುತ್ರಿ ಚರಿಷ್ಮಾ ರೈ ರವರು ಮೊದಲ ಸದಸ್ಯತ್ವ ಸ್ವೀಕರಿಸಿ ಪಾಣೆಮಂಗಳೂರು ಬ್ಲಾಕ್ ವ್ಯಾಪ್ತಿಯ ನೊಂದಾವಣೆಗೆ ಚಾಲನೆ ನೀಡಿದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ್ ಭಂಡಾರಿ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ,ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಆಲಿ ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು,ವಲಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಸದಸ್ಯರು ಉಪಸ್ಥರಿದ್ದರು…