ಬಂಟ್ವಾಳ: ಹಳ್ಳಕ್ಕೆ ಉರುಳಿ ಬಿದ್ದ ಮಂಗಳೂರು-ಧರ್ಮಸ್ಥಳ ನಡುವೆ ಸಂಚರಿಸುತ್ತಿದ್ದ ಬಸ್, ಪ್ರಯಾಣಿಕರಿಗೆ ಗಾಯ

ಬಂಟ್ವಾಳ: ಮಂಗಳೂರು-ಧರ್ಮಸ್ಥಳ ನಡುವೆ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳದ ವಗ್ಗ ಬಳಿ ರಸ್ತೆ ಬದಿಯ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ಸೋಮವಾರ ಸಂಜೆ ನಡೆದಿದೆ. ಈ ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸ್ಥಳೀಯ ಯುವಕರು ಘಟನೆ ನಡೆದ ಸ್ಥಳಕ್ಕೆ ಧಾವಿಸಿ ಬಸ್‌ನಿಂದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಹಾಗೂ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ ಮಂಗಳೂರು ವಿಭಾಗಕ್ಕೆ ಸೇರಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ಸ್ಥಳಕ್ಕೆ ಪೊಲೀಸರು ಬಂದಿದ್ದು ತನಿಖೆ ನಡೆಸಿದ್ದಾರೆ.