Published On: Tue, Sep 24th, 2024

Big Breaking: ಮುಡಾ ಪ್ರಕರಣ, ಸಿಎಂ ಸಿದ್ದರಾಮಯ್ಯಗೆ ಹಿನ್ನಡೆ, ಸಿಎಂ ಅರ್ಜಿ ವಜಾ ಮಾಡಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಅವ್ಯವಹಾರ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದರು. ಇದನ್ನು ಪ್ರಶ್ನಿ ಸಿಎಂ ಪರ ವಕೀಲರು ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸಿದ್ದರಾಮಯ್ಯ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ.

ಪ್ರಕರಣ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯ ಬಗ್ಗೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ 6 ದಿನಗಳ ಸುದೀರ್ಘ ವಾದವನ್ನು ಆಳಿಸಿದ ನಂತರ, ಸಿಎಂ ಸಿದ್ದರಾಮಯ್ಯ ಪರ ವಕೀಲರು, ಸಾಲಿಸಿಟರ್ ಜನರಲ್ ಹಾಗೂ ದೂರುದಾರರ ಪರ ವಕೀಲರು ಸುದೀರ್ಘ ವಾದ ಮಂಡನೆ ಮಾಡಿದ್ದರು.

ಇನ್ನು ಪ್ರಕರಣದ ಬಗ್ಗೆ ಸಿಎಂ ಪರ ವಕೀಲರು ವಾದ ಮಂಡನೆ ಮಾಡಿದ್ದರು. ಯಾವುದಾದರೂ ಕಡತಕ್ಕೆ ಸಿಎಂ ಸಹಿ ಹಾಕಿದ್ದಾರೆಯೇ ಎಂದು ಹೇಳಿಲ್ಲ. ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ವಿಶೇಷ ಸಂದರ್ಭದಲ್ಲಷ್ಟೇ ಬಳಸಬೇಕು. ಹಾಗೆ ಬಳಸಿದಾಗ ಅದಕ್ಕೆ ಕಾರಣಗಳನ್ನು ನೀಡಬೇಕು. ಆದರೆ ಪ್ರಕ್ರಿಯೆ ಪಾಲಿಸದೇ ತರಾತುರಿಯಲ್ಲಿ ಆದೇಶ ನೀಡಿದ್ದಾರೆ. ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 17 ಎ ಅಡಿಯಲ್ಲಿ ಪೊಲೀಸ್ ಅಧಿಕಾರಿಗಳಿಗೆ ಅನುಮತಿ ನೀಡಬಹುದೇ ಹೊರತು, ಖಾಸಗಿ ವ್ಯಕ್ತಿಗಳಿಗೆ ನೀಡುವಂತಿಲ್ಲ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ಒಪ್ಪಬೇಕಿತ್ತು. ಏಕೆ ಒಪ್ಪಿಲ್ಲವೆಂಬುದಕ್ಕೆ ರಾಜ್ಯಪಾಲರು ಸೂಕ್ತ ಕಾರಣ ನೀಡಿಲ್ಲ. ಬಿಜೆಪಿ, ಜೆಡಿಎಸ್ ನಾಯಕ ವಿರುದ್ಧದ ದೂರಿಗೆ ಅನುಮತಿ ನೀಡದೇ ಸಿದ್ದರಾಮಯ್ಯ ವಿರುದ್ಧ ಮಾತ್ರ ಅನುಮತಿ ನೀಡಿ ತಾರತಮ್ಯ ನೀತಿ ಅನುಸರಿಸಿದ್ದಾರೆ ಎಂದು ವಾದಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter