ಚಿಕಿತ್ಸೆಗೆಂದು ಬಂದ ಯುವಕನಿಗೆ ಶಸ್ತ್ರಚಿಕಿತ್ಸೆ ಮಾಡಿ ಪ್ರಾಣ ತೆಗೆದ ಮಂಗಳೂರಿನ ವೈದ್ಯ

ಮಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ಒಂದು ಜೀವವೇ ಹೋಗಿದೆ ನೋಡಿ. ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಸಾವನ್ನಪ್ಪಿದ್ದಾನೆ. ಮಂಗಳೂರು ನಗರದ ಕಂಕನಾಡಿಯ ಬೆಂದೂರ್ವೆಲ್ನಲ್ಲಿ ಈ ಘಟನೆ ನಡೆದಿದೆ. ಉಳ್ಳಾಲದ ಅಕ್ಕರೆಕೆರೆ ನಿವಾಸಿ ಮುಹಮ್ಮದ್ ಮಾಝಿನ್(32) ಮೃತ ಹೊಂದಿದ ವ್ಯಕ್ತಿ ಎಂದು ಹೇಳಲಾಗಿದೆ.
ಬೆಂದೂರ್ವೆಲ್ನಲ್ಲಿರುವ ಫ್ಲೋಂಟ್ ಕಾಸ್ಮೆಟಿಕ್ ಸರ್ಜರಿ ಮತ್ತು ಹೇರ್ ಟ್ರಾನ್ಸ್ ಪ್ಲಾಂಟ್ ಕ್ಲಿನಿಕ್ಗೆ ಚಿಕಿತ್ಸೆಗೆಂದು ಯುವಕ ಬಂದಿದ್ದಾನೆ. ಈ ವೇಳೆ ಎದೆಯ ಎಡಭಾಗದ ಸಣ್ಣ ಗುಳ್ಳೆಗಳು ಬಿದ್ದಿದೆ ಎಂದು ಯುವಕ ಹೇಳಿದ್ದಾನೆ. ಇದಕ್ಕೆ ಅಲ್ಲಿ ವೈದ್ಯರು, ಅರ್ಧ ಗಂಟೆಯಲ್ಲಿ ಮುಗಿಯಬಹುದಾಗಿದ್ದ ಸಣ್ಣ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಇನ್ನು ವೈದ್ಯರ ಶಸ್ತ್ರಚಿಕಿತ್ಸೆ ಸಂಜೆಯಾದರು ಮುಗಿಯದ ಹಿನ್ನೆಲೆ ಅನುಮಾನಗೊಂಡ ಮಾಝಿನ್ ಮನೆಯರಿಗೆ ತಿಳಿಸಿದ್ದಾನೆ. ಸಂಶಯಗೊಂಡು ವಿಚಾರಿಸಿದಾಗ ಆರೋಗ್ಯದಲ್ಲಿ ಏರುಪೇರು ಆಗಿರುವುದಾಗಿ ಹೇಳಿದ್ದಾರೆ. ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ಮಾಝಿನ್ ದಾಖಲಿಸಲಾಗಿದೆ. ಆದರೆ ಪರೀಕ್ಷಿಸಿದ ವೈದ್ಯರಿಂದ ಮಾಝಿನ್ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ. ಸರ್ಜರಿಯ ವೇಳೆ ವೈದ್ಯರು ಎಡವಟ್ಟು ಮಾಡಿಕೊಂಡಿರುವುದಾಗಿ ಕುಟುಂಬಸ್ಥರ ಆರೋಪಿಸಿದ್ದಾರೆ. ಇನ್ನು ಕದ್ರಿ ಠಾಣೆ ಪೊಲೀಸರು ಯು.ಡಿ.ಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.