ಶಿರೂರು ಗುಡ್ಡ ಕುಸಿತ: ಲಾರಿ ಚಾಲಕ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆ
ಶಿರೂರು: ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಒಂದು ಸಿಕ್ಕಿದೆ. ಗುಡ್ಡ ಕುಸಿತದಿಂದ 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಪತ್ತೆ ಮಾಡಲಾಗಿತ್ತು. ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಹಾಗೂ ಜಗನ್ನಾಥ ನಾಯ್ಕ ಪತ್ತೆಯಾಗಿರಲಿಲ್ಲ. ಇದೀಗ ಲಾರಿಯೊಳಗೆ ಅರ್ಜುನನ ಮೃತದೇಹ ಎರಡು ತುಂಡಾಗಿ ಪತ್ತೆಯಾಗಿದೆ. ಇನ್ನೂ ಇಬ್ಬರು ಕಣ್ಮರೆಯಾದವರ ಬಗ್ಗೆ ಶೋಧ ನಡೆಸಲಾಗುತ್ತಿದೆ.
ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿ ಪತ್ತೆಯಾಗಿದೆ. ಅರ್ಜುನನ ಮೃತದೇಹ ಎರಡು ತುಂಡಾಗಿ ಲಾರಿಯೊಳಗೆ ಪತ್ತೆಯಾಗಿದೆ. ಗಂಗಾವಳಿ ನದಿಯಿಂದ ಲಾರಿ ಹಾಗೂ ಸಿಕ್ಕಿರುವ ಮೃತದೇಹವನ್ನು ಮೇಲೆತ್ತುವ ಕಾರ್ಯಚರಣೆ ಮುಂದುವರಿದೆ. 72 ದಿನಗಳ ನಂತರ ನದಿಯಲ್ಲಿ ಲಾರಿ ಹಾಗೂ ಇಬ್ಬರ ಮೃತದೇಹಗಳು ಪತ್ತೆಯಾಗಿದೆ. ಈ ಲಾರಿ ಗುಡ್ಡ ಕುಸಿತಕ್ಕೆ ಸಿಲುಕಿ ನಜ್ಜುಗುಜ್ಜಾಗಿತ್ತು.
ಇನ್ನು ಆರು ದಿನಗಳಿಂದ ಇನ್ನಿಬ್ಬರ ದೇಹಕ್ಕಾಗು ಪತ್ತೆ ಕಾರ್ಯಚರಣೆ ಮುಂದುವರಿದೆ. ಕೆಲವು ದಿನಗಳ ಹಿಂದೆ ಅರ್ಜುನ್ ಓಡಿಸುತ್ತಿದ್ದ ಲಾರಿಯೂ ಪತ್ತೆಯಾಗಿತ್ತು. ಇದೀಗ ಅರ್ಜುನ್ ಅವರ ದೇಹ ಪತ್ತೆಯಾಗಿದೆ. ಇನ್ನಿಬ್ಬರ ದೇಹ ಪತ್ತೆಯಾಗಬೇಕಿದೆ.