ಉಡುಪಿ: ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಗೆ ಮೆಣಸು ಸಾಗಾಟದ ಪಿಕಪ್ ಢಿಕ್ಕಿ, ಹಲವರಿಗೆ ಗಾಯ

ಉಡುಪಿ: ಕೊಲ್ಲೂರಿಗೆ ಹೋಗುತ್ತಿದ್ದ ಖಾಸಗಿ ಬಸ್ಗೆ ಮೆಣಸು ಸಾಗಾಟದ ಪಿಕಪ್ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಪಲ್ಟಿಯಾಗಿ ಐವರಿಗೆ ಗಂಭೀರ ಗಾಯಗಳಾಗಿವೆ. ಕೊಲ್ಲೂರಿನ ಇಡೂರು ಕುಂಞಾಡಿ ಸಮೀಪದ ಜನ್ನಾಲ್ನಲ್ಲಿ ಈ ಘಟನೆ ನಡೆದಿದೆ.
ಈ ಖಾಸಗಿ ಬಸ್ಸಿನಲ್ಲಿ ಮೂವತ್ತಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು ಎಂದು ಹೇಳಲಾಗಿದೆ. ಕೊಲ್ಲೂರಿನಿಂದ ಬರುತ್ತಿದ್ದ ಮೆಣಸು ಸಾಗಿಸುತ್ತಿದ್ದ ಪಿಕಪ್ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಹಾಗೂ ಪಿಕ್ ಆಫ್ ವಾಹನ ಚಾಲಕ ನಿರ್ವಾಹಕರು ಸೇರಿದಂತೆ ಐವರಿಗೆ ಗಂಭೀರ ಗಾಯಗಳಾಗಿವೆ.
ಇನ್ನು ಗಾಯಗೊಂಡವರಿಗೆ ಕುಂದಾಪುರದ ಖಾಸಗಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರ ಗಾಯಗೊಂಡವರನ್ನು ರಾಘವೇಂದ್ರ (43) ವಾಸಿಂ (30) ಅಮೃತಾ (17), ಪ್ರತ್ಯಸ್ಥಿ (16), ಅಖಿತ್ (28) ಎಂದು ಗುರುತಿಸಲಾಗಿದೆ. ಅಪಘಾತದಿಂದ ಎರಡೂ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿದೆ, ಇದೀಗ ಅಪಘಾತಕ್ಕೆ ಸಂಬಂಧಿಸಿದಂತೆ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.