ವೈನಾಡಿನ ಘಟನೆ ಬಗ್ಗೆ ಕಟೀಲು ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡ ಸೈನಿಕ ಬ್ರಿಜೇಶ್ ಕುಮಾರ್

ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ, ಕಟೀಲಿನಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು. ಈ ಸಂವಾದ ಕಾರ್ಯಕ್ರಮದಲ್ಲಿ ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಕಟೀಲು ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿ ಬ್ರಿಜೇಶ್ ಕುಮಾರ್ ಅವರು ಭಾಗವಹಿಸಿದರು. ಈ ವೇಳೆ ಅವರು ಹಲವು ವಿಚಾರಗಳನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ಅವರು ವೈನಾಡಿನಲ್ಲಿ ಜನರನ್ನು ರಕ್ಷಿಸುವಲ್ಲಿ ಭಾರತೀಯ ಸೈನ್ಯದ ಪಾತ್ರ ಬಗ್ಗೆ ಹಾಗೂ ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಬ್ರಿಜೇಶ್ ಕುಮಾರ್ ಅವರ ಪತ್ನಿ ಮತ್ತು ತಾಯಿ ಕೂಡ ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಗಿರೀಶ ತಂತ್ರಿ ಭಾರತೀಯ ಸೈನ್ಯದಲ್ಲಿರುವ ಹೆಮ್ಮೆಯ ಹಿರಿಯ ವಿದ್ಯಾರ್ಥಿಯನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ಸ್ವಾಗತಿಸಿದರು. ಶಿಕ್ಷಕಿ ಶ್ರುತಿ ಕೆವಿ ಕಾರ್ಯಕ್ರಮವನ್ನು ನಿರೂಪಿಸಿದರು.