ಬಂಟ್ಚಾಳ ಎಸ್ ವಿಎಸ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಬಂಟ್ವಾಳ : “ರಾಷ್ಟ್ರೀಯ ಸೇವಾ ಯೋಜನೆ ಘಟಕವು ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆಯನ್ನು ಒದಗಿಸಿಕೊಡುತ್ತದೆ” ಎಂದು ಶ್ರೀ ವೆಂಕಟರಮಣ ಸ್ವಾಮೀ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಮನೋಹರ್ ಎಸ್. ದೊಡ್ಡಮನಿ ಹೇಳಿದರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ದಿನಾಚರಣೆ ಕಾರ‍್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
“ಸ್ವಾರ್ಥ ಮನೋಭಾವನೆಯನ್ನು ತೊರೆದು ಮಾನಸಿಕ ಸ್ಥೆರ್ಯವನ್ನು ತುಂಬಿ ಹೊಂದಾಣಿಕೆಯ ಮನೋಭಾವ, ನಾಯಕತ್ವದ ಗುಣ, ರಾಷ್ಟ್ರೀಯ ಭಾವೈಕ್ಯತೆ ಮುಂತಾದ ಜೀವನ ಮೌಲ್ಯಗಳ ಜತೆ ಆರೋಗ್ಯವಂತ ಸಮಾಜದ ನಿಮಾಣಕ್ಕೆ ರಾಷ್ಟ್ರೀಯ ಸೇವಾ ಯೋಜನೆ ಸಹಕಾರಿಯಾಗುತ್ತದೆ” ಎಂದವರು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಸುದರ್ಶನ್ ಬಿ. ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಲಕ್ಷ್ಮೀನಾರಾಯಣ ಕೆ, ಉಪನ್ಯಾಸಕ, ಉಪನ್ಯಾಸಕೇತರರು ಹಾಗೂ ವಿದ್ಯಾರ್ಥಿಗಳು ಈ ಕಾರ‍್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎನ್.ಎಸ್.ಎಸ್ ಘಟಕದ ಕಾರ‍್ಯಕ್ರಮ ಅಧಿಕಾರಿ ಶಶಿಧರ್ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್ನೆಸ್ಸೆಸ್ ಸ್ವಯಂಸೇವಕರು ಎನ್ನೆಸ್ಸೆಸ್ ಗೀತೆ ಹಾಡಿದರು. ಎನ್.ಎಸ್.ಎಸ್ ಘಟಕ ನಾಯಕಿ ಪ್ರಾಜ್ಞವಿ ಸ್ವಾಗತಿಸಿ, ಎನ್.ಎಸ್.ಎಸ್ ಘಟಕ ನಾಯಕ ಧನುಷ್ ವಂದಿಸಿದರು. ಎನ್.ಎಸ್.ಎಸ್ ಸ್ವಯಂ ಸೇವಕಿ ಕುಮಾರಿ ಹರ್ಷ ಕಾರ್ಯಕ್ರಮ ನಿರೂಪಿಸಿದರು.