ಕಲ್ಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಉಚಿತ ಗುರುತಿನ ಕಾರ್ಡ್ ವಿತರಣೆ
ಬಂಟ್ಚಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕೊಡುಗೆಯಾಗಿ ನೀಡಿದ ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕಲ್ಲಡ್ಕ ಶೌರ್ಯ ತಂಡದ ಅಧ್ಯಕ್ಷ ಮಾಧವ ಸಾಲಿಯನ್ ಕುದ್ರೆಬೆಟ್ಟು, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತಂಡದ ಸದಸ್ಯ ತುಳಸಿ, ತಂಡದ ಸಂಯೋಜಕಿ ವಿದ್ಯಾ, ಸದಸ್ಯರುಗಲಾದ ಸೌಮ್ಯ, ಚಿನ್ನಾ ಕಲ್ಲಡ್ಕ, ಶಾಲಾ ಮುಖ್ಯ ಶಿಕ್ಷಕಿ ಚೇತನ ಕುಮಾರಿ, ಶಿಕ್ಷಕಿರಾದ ಮೋನಿಷಾ, ಜಯಂತಿ ಉಪಸ್ಥಿತರಿದ್ದರು.