ಬಂಟ್ವಾಳ: ಗ್ರಾಮಾಡಳಿತ ಅಧಿಕಾರಿಗಳಿಂದ ತೋಳಿಗೆ ಕಪ್ಪುಪಟ್ಟಿ ಧರಿಸಿ ಮುಷ್ಕರ
ಬಂಟ್ವಾಳ: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ, ರಾಜ್ಯ ಸಂಘದ ಕಾರ್ಯಕಾರಿಣಿ ಸಭೆ ನಿರ್ಣಯದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಅನಿರ್ದಿಷ್ಟಾವಧಿ ಮುಷ್ಕರವನ್ನು ರಾಜ್ಯಾದ್ಯಂತ ಆಯೋಜಿಸಿದ್ದು, ಅದರಂತೆ ಬಂಟ್ವಾಳದಲ್ಲೂ ಗುರುವಾರ ಆಡಳಿತಸೌಧ ದ ಮುಂಭಾಗ ಗ್ರಾಮಾ ಆಡಳಿತ ಅಧಿಕಾರಿಗಳು ತೋಳಿಗೆ ಕಪ್ಪುಪಟ್ಟಿ ಧರಿಸಿ ಮುಷ್ಕರ ನಡೆಸಿದರು.
ಈ ಸಂದರ್ಭ ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್ ಅವರ ಮೂಲಕ ಕಂದಾಯ ಸಚಿವರಿಗೆ ಮನವಿಯನ್ನು ಸಂಘದ ವತಿಯಿಂದ ಸಲ್ಲಿಸಲಾಯಿತು.ಪ್ರಾಸ್ತಾವಿಕವಾಗಿ ಮಾತನಾಡಿದ ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಅನಿಲ್ ಕೆ. ಪೂಜಾರಿ ಸಮಸ್ಯೆಗಳ ಕುರಿತು ಮಾಹಿತಿ ನೀಡಿದರು
ಈ ಸಂದರ್ಭ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಉಮಾನಾಥ ರೈ ಮೇರಾವು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಮಾತನಾಡಿ ಗ್ರಾಮಾಡಳಿತ ಅಧಿಕಾರಿಗಳ ನ್ಯಾಯೋಚಿತ ಬೇಡಿಕೆಗೆ ಪೂರಕವಾಗಿ ಸಂಘ ಬೆಂಬಲವಾಗಿ ನಿಲ್ಲಲಿದೆ ಎಂದರು.
ಮುಷ್ಕರಕ್ಕೆ ಬೆಂಬಲವಾಗಿ ಕಂದಾಯ ಇಲಾಖಾ ನೌಕರರ ಸಂಘದ ತಾಲೂಕು ಅಧ್ಯಕ್ಷ ರಾಜೇಶ್ ನಾಯ್ಕ್, ರಾಜ್ಯ ಗ್ರಾಮಾಡಳಿತಾಧಿಕಾರಿಗಳ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಜೆ.ಜನಾರ್ದನ, ಎನ್.ಪಿ.ಎಸ್. ನೌಕರರ ಸಂಘದ ತಾಲೂಕು ಅಧ್ಯಕ್ಷ ಸಂತೋಷ್,ಉಪತಹಶೀಲ್ದಾರ್ ನರೇಂದ್ರ ನಾಥ್ ಮಿತ್ತೂರು ಸಹಿತ ನಾನಾ ಇಲಾಖೆಗಳ ಪ್ರತಿನಿಧಿಗಳು ಭಾಗವಹಿಸಿದರು. ಗ್ರಾಮಾಡಳಿತ ಅಧಿಕಾರಿಗಳ ಸಂಘದ ತಾಲೂಕು ಉಪಾಧ್ಯಕ್ಷ ಕರಿಬಸಪ್ಪ ನಾಯ್ಕ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್, ಜಿಲ್ಲಾ ಪ್ರತಿನಿಧಿ ಪ್ರಕಾಶ್ ಮತ್ತಿಹಳ್ಳಿ, ಖಜಾಂಚಿ ವೈಶಾಲಿ, ಗೌರವಾಧ್ಯಕ್ಷ ಪ್ರವೀಣ್ ಕುಮಾರ್ ಸಹಿತ ಗ್ರಾಮಾಡಳಿತ ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಂಡರು,