ಮೂಡುಬಿದಿರೆ : ಪರೀಕ್ಷೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿ ಹೊಡೆದು ವಿದ್ಯಾರ್ಥಿ ಮೃತಪಟ್ಟ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬನ್ನಡ್ಕದಲ್ಲಿ ನಡೆದಿದೆ. ಪಡುಮಾರ್ನಾಡು ಗ್ರಾಪಂ ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ ಆದಿತ್ಯ ಎಂದು ಗುರುತಿಸಲಾಗಿದೆ. ಆದಿತ್ಯ ಮೂಡುಬಿದಿರೆ ಜೈನ ಪ್ರೌಢಶಾಲೆಯ 9ನೇ ತರಗತಿಯಲ್ಲಿ ಓದುತ್ತಿದ್ದ, ಆದಿತ್ಯ ಪರೀಕ್ಷೆ ಮುಗಿಸಿ ತನ್ನ ಗೆಳೆಯರೊಡನೆ ಮನೆಗೆ ಹೊರಟಿದ್ದು ಬನ್ನಡ್ಕದಲ್ಲಿ ಬಸ್ಸಿನಿಂದಿಳಿದು ರಸ್ತೆ ದಾಟುವ ಸಂದರ್ಭದಲ್ಲಿ ವೇಗವಾಗಿ ಬರುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ.

ಇನ್ನು ಕಾರು ಢಿಕ್ಕಿ ಹೊಡೆದ ರಭಸಕ್ಕೆ ಆದಿತ್ಯ ಹೆದ್ದಾರಿಯಿಂದ ಚರಂಡಿಗೆ ಹೋಗಿ ಬಿದ್ದಿದ್ದಾನೆ. ಈ ವೇಳೆ ಕಾರಿನವರೇ ವಿದ್ಯಾರ್ಥಿಯನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಆದರೆ ಅಧಿಕ ರಕ್ತಸ್ರಾವವಾಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

By Suddi9

Leave a Reply

Your email address will not be published. Required fields are marked *