ಬಂಟ್ವಾಳ: ಬೆಂಜನ ಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬೆಂಜನ ಪದವು: ಬೆಂಜನ ಪದವು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ BC ಟ್ರಸ್ಟ್ ಬಂಟ್ವಾಳ ತಾಲೂಕು ಜನಜಾಗೃತಿ ವೇದಿಕೆ ಬಂಟ್ವಾಳ ಆಯೋಜಿಸಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಂಜನ ಪದವು ಒಕ್ಕೂಟ ಅಧ್ಯಕ್ಷರಾದ ಶ್ರೀ ಜನಾರ್ದನ ಬಾರಿಂಜರವರು ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಕವಿತಾ ಹೇಮಾಚಂದ್ರ ರವರು ಮಾಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಬಂಟ್ವಾಳ ತಾಲೂಕು ಆಸ್ಪತ್ರೆಯ R K S K ಕೌನ್ಸಿಲರ್ ಆಗಿರುವ ಶ್ರೀಮತಿ ಅಕ್ಷತಾ ಅವರು ಆಗಮಿಸಿ ಮಾತನಾಡಿದರು, ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಉತ್ತಮ ಸಂಸ್ಕೃತಿ ಸಂಸ್ಕಾರ ಕಲಿಯಬೇಕು ಹಿರಿಯರಿಗೆ ಗೌರವವನ್ನು ಕೊಡುವುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವಾಗ ಒಳ್ಳೆಯ ವ್ಯಕ್ತಿಗಳ ಜೊತೆ ಒಡನಾಟ ಇಟ್ಟುಕೊಳ್ಳುವುದು. ಉತ್ತಮ ಆಲೋಚನೆ ಮಾಡುವುದರ ಜೊತೆಗೆ ದೇವರ ಧ್ಯಾನವನ್ನು ಮಾಡುವುದು. ಮೊಬೈಲ್ ಬಳಕೆ ಕಡಿಮೆ ಮಾಡುವುದು. ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಒಳ್ಳೆಯ ಜೀವನ ಕೌಶಲ್ಯಗಳನ್ನು ಬೆಳೆಸುವ ಬಗ್ಗೆ ಯೋಚನೆ ಮಾಡಬೇಕು ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ರಾದೇಶ್ ತೋಳ್ ಪಾಡಿ, ಶ್ರೀ ರವಿಚಂದ್ರ ಮೈಯ್ಯ ಉಪಸ್ಥಿತರಿದ್ದರು. ವಲಯ ಮೇಲ್ವಿಚಾರಕರಾದ ಹರಿಣಾಕ್ಷಿಯವರು ಕಾರ್ಯಕ್ರಮ ನಿರೂಪಿಸಿ, ಸೇವಾ ಪ್ರತಿನಿಧಿ ಶ್ರೀಮತಿ ರತ್ನ ವಂದಿಸಿದರು.