ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ತಪ್ಪಿದ ಭಾರೀ ದೊಡ್ಡ ಅನಾಹುತ
ಪುತ್ತೂರು: ಪುತ್ತೂರು ತಾಲೂಕಿನ ಕೆಮ್ಮಾರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು,ರಸ್ತೆ ಬದಿಯ ಪಕ್ಕದಲ್ಲೇ ಇರುವ ತಂಗುದಾಣ ಬಳಿ ಕಾರು ಮಗುಚಿ ಬಿದ್ದಿದೆ.
ಇನ್ನು ಬಸ್ ನಿಲ್ದಾಣದ ಬಳಿ ಹೆಚ್ಚಿನ ಪ್ರಯಾಣಿಕರಿಲ್ಲದ ಕಾರಣ ದೊಡ್ಡ ಮಟ್ಟದ ಅನಾಹುತ ತಪ್ಪಿದೆ. ಉಪ್ಪಿನಂಗಡಿ-ಸುಬ್ರಹ್ಮಣ್ಯ ಸಂಪರ್ಕಿಸುವ ರಸ್ತೆಯ ಕೆಮ್ಮಾರ ಬಳಿ ಈ ಘಟನೆ ನಡೆದಿದೆ. ಉರುಳಿ ಬಿದ್ದ ಕಾರನ್ನು ತಕ್ಷಣವೇ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ಮೇಲಕ್ಕೆತ್ತಿದ್ದಾರೆ. ಇನ್ನು ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.