ಮಂಗಳೂರು: ಧಗ ಧಗನೆ ಹೊತ್ತಿ ಉರಿದ ಐಷಾರಾಮಿ ಬಿ.ಎಂ.ಡಬ್ಲ್ಯೂ ಕಾರು

ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಬಿಎಂಡ್ಲ್ಯೂ ಕಾರೊಂದು ಹಠಾತ್ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟು ಕರಕಲಾದ ಘಟನೆ ಮಂಗಳೂರಿನ ಹೊರ ವಲಯದ ಅಡ್ಯಾರ್‌ನಲ್ಲಿ ನಡೆದಿದೆ. ಬಿ.ಸಿ ರೋಡ್ ಸಮೀಪದ ಗುರುದೀಪ್ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಇವರು ಬಿಸಿರೋಡ್‌ನಿಂದ ಮಂಗಳೂರಿನ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಡ್ಯಾರ್‌ನ ಸಹ್ಯಾದ್ರಿ ಕಾಲೇಜು ಬಳಿ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಎಚ್ಚೆತ್ತ ಕಾರು ಚಾಲಕ ಕಾರನ್ನು ನಿಲ್ಲಿಸಿ ಕೂಡಲೇ ಹೊರ ಬಂದು ಜೀವ ಉಳಿಸಿಕೊಂಡಿದ್ದಾರೆ.
ಸೆಪ್ಟೆಂಬರ್ 28 ಶನಿವಾರ ಮಧ್ಯಾಹ್ನದ ಹೊತ್ತಿಗೆ ಈ ಘಟನೆ ನಡೆದಿದ್ದು, ಬೆಂಕಿ ಅವಘಡಕ್ಕೆ ತುತ್ತಾಗಿ ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ಏನೆಂದು ಇನ್ನೂ ತಿಳಿದು ಬಂದಿಲ್ಲ.