Published On: Sun, Sep 29th, 2024

ಶ್ರೀ ಕ್ಷೇ. ಧ. ಗ್ರಾ. ಯೋ.ಯ ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಯ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ 

ಬಂಟ್ವಾಳ : ಕೆಲಸ ಬಲ್ಲವನಿಗೆ ಬದುಕಿಗೆ ಚಿಂತೆ ಇಲ್ಲ. ಭಕ್ತಿ, ಶ್ರದ್ಧೆ ,ನಂಬಿಕೆಯಿಂದ ಮನುಷ್ಯನ ಜೀವನ ನಿಂತಿದೆ.ಸೇವೆ ಮತ್ತು ಆರ್ಥಿಕ ಸದೃಢತೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಮಂತ್ರ. ಆ ಮೂಲಕ ಪ್ರತೀ ಕುಟುಂಬದಲ್ಲಿ ಆರ್ಥಿಕ ಸುಸ್ಥಿರತೆ ತರುವ ಸಂಕಲ್ಪದೊಂದಿಗೆ ಹಣಕಾಸು ಸಂಸ್ಥೆಯೊಂದಿಗಿನ ಸಂಪರ್ಕ ಸೇತುವಾಗಿ ಗ್ರಾಮಾಭಿವೃದ್ಧಿ ಯೋಜನೆ ಕೆಲಸ ಮಾಡುತ್ತಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ   ಉಡುಪಿಯ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇ ಗೌಡ ಹೇಳಿದರು.
ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ   ರವಿವಾರ  ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.)ಬಂಟ್ವಾಳ ಇದರ ವ್ಯಾಪ್ತಿಯ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.


ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ ತಾಲೂಕು ಅಧ್ಯಕ್ಷ ರೊನಾಲ್ಡ್ ಡಿಸೋಜ ಅಮ್ಟಾಡಿ ಸಮಾವೇಶವನ್ನು ಉದ್ಘಾಟಿಸಿ  ಮಾತನಾಡಿ,ಯೋಜನೆಯಲ್ಲಿ ಸೇರಿ ತನ್ನ ಅಗತ್ಯತೆಯನ್ನು ಪೂರೈಸಿದ ಬಳಿಕ ಯೋಜನೆಯ ಕಾರ್ಯವನ್ನು ದೂರುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಪದಾಧಿಕಾರಿಗಳು ಯೋಜನೆಯ ಬಗ್ಗೆ ಸ್ಪಷ್ಟ ಮಾಹಿತಿ ಅರಿತುಕೊಂಡು ಸದಸ್ಯರಿಗೆ ಸರಿಯಾದ ಮಾಹಿತಿಯನ್ನು ಒದಗಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ  ಚಿದಾನಂದ ರೈ ಕಕ್ಯ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಪ್ರಗತಿಬಂದು ಸ್ವ ಸಹಾಯ ಕೇಂದ್ರ ಒಕ್ಕೂಟದ ಮಾಜಿ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ ಅವರು ಗ್ರಾಮಾಭಿವೃದ್ಧಿ ಯೋಜನೆಯಿಂದ ಸಮುದಾಯ ಹಾಗೂ ಸಂಘ ಸದಸ್ಯರಿಗೆ ಆಗುವ ಪ್ರಯೋಜನಗಳ ಬಗ್ಗೆ   ಮಾಹಿತಿ ನೀಡಿದರು.
ಮಂಗಳೂರು ಮಲ್ಲಿಕಟ್ಟೆಯ
ಎಸ್. ಬಿ. ಐ ಬ್ಯಾಂಕ್ ಶಾಖೆಯ ಪ್ರದಾನ ವ್ಯವಸ್ಥಾಪಕಿ ಭವಾನಿ ಅವರು, ಸ್ವ-ಸಹಾಯ ಸಂಘಗಳು ಬ್ಯಾಂಕಿಗೆ ನೀಡಬೇಕಾದ ದಾಖಲಾತಿ ಹಾಗೂ ಬ್ಯಾಂಕಿನ ಪ್ರತಿನಿಧಿಯಾಗಿ ಎಸ್ .ಕೆ .ಡಿ. ಆರ್ .ಡಿ .ಪಿ ನಿರ್ವಹಿಸುತ್ತಿರುವ ಜವಾಬ್ದಾರಿಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ ಇದುವರೆಗೆ ಬಂಟ್ವಾಳ ಯೋಜನಾ ಕಚೇರಿಯ ವ್ಯಾಪ್ತಿಯ ದಾಖಲೆಯ 2526 ಖಾತೆಗಳನ್ನು ಬ್ಯಾಂಕಿನಲ್ಲಿ ತೆರೆದಿದೆ ಎಂದರು.

ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ಯೋಜನೆಯ ದಶಾಂಶಗಳ ಹಾಗೂ ಸ್ವಸಹಾಯ ಸಂಘಗಳ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರು
ಎಸ್.ಕೆ.ಡಿ.ಆರ್.ಡಿ.ಪಿ, ಎಂ.ಐ.ಎಸ್. ಯೋಜನಾಧಿಕಾರಿ ಪ್ರೇಮನಾಥ್, ಸಂಘದ ಸಾಲ ಮರುಪಾವತಿ ಬಗ್ಗೆ ಮಾಹಿತಿ ನೀಡಿದರು.
ತಾಲೂಕು  ಯೋಜನಾಧಿಕಾರಿ ಬಾಲಕೃಷ್ಣ, ಯೋಜನೆಯ ವಿವಿಧ ಕಾರ್ಯಕ್ರಮಗಳು ಹಾಗೂ ತಾಲೂಕಿನಲ್ಲಿ ಕೈಗೊಳ್ಳಾದ ಸಾಧನಗಳ ಮಾಹಿತಿ ನೀಡಿ, ಯೋಜನೆಯ ಮೂಲಕ ಅನುಷ್ಠಾನ ಕಾರ್ಯಕ್ರಮಗಳ ಜೊತೆಗೆ  ಬಂಟ್ವಾಳ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕಿನಲ್ಲಿ ಇದುವರೆಗೆ ಸಮುದಾಯ ಅಭಿವೃದ್ಧಿ ಕಾರ್ಯಗಮಗಳಿಗೆ 11.98 ಕೋ.ರೂ. ಅನುದಾನ ನೀಡಲಾಗಿದೆ, 223 ಮಂದಿಗೆ ತಿಂಗಳ ಮಾಶಾಸನ,410 ಮಂದಿಗೆ ಜನಮಂಗಲ ಮೂಲಕ ಸಲಕರಣೆ,46 ಮಂದಿಗೆ ಕ್ರಿಟಿಕಲ್ ಸಹಾಯಧನ 7. 70 ಲಕ್ಷ ರೂ. ನೀಡಲಾಗಿದ್ದು,  ಈ ವರ್ಷ ಶಾಲೆಗಳಿಗೆ 18 ಜ್ಞಾನದೀಪ ಶಿಕ್ಷಕರನ್ನು, 310 ಮಕ್ಕಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ಹಾಗೂ ವಿವಿಧ ಶಾಲೆಗಳಿಗೆ ಒಟ್ಟು 164 ಜೊತೆ ಬೆಂಚ್ ,ಡೆಸ್ಕ್ ಸೇರಿದಂತೆ ಪೀಠೋಪಕರಣ ಮಂಜೂರಾಗಿದೆ ಎಂದರು.
ವೇದಿಕೆಯಲ್ಲಿ ವಲಯ ಅಧ್ಯಕ್ಷರುಗಳಾದ  ಜನಾರ್ದನ ಆಚಾರ್ಯ, ಲೀಡಿಯೋ ಪಿಂಟೋ, ಗಂಗಾಧರ ಭಂಡಾರಿ, ಜಯಲಕ್ಷ್ಮಿ, ಮನೋಹರ್ ಕುಲಾಲ್, ರಾಧಾಕೃಷ್ಣ ಆಚಾರ್ಯ, ಉಮೇಶ್, ಶೌರ್ಯ ತಂಡದ ಕ್ಯಾಪ್ಟನ್ ಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಯೋಜನೆಯ ಕಾರ್ಯ ಚಟುವಟಿಕೆಗಳನ್ನು ವಿವರಿಸುವ ಕಿರು ಚಿತ್ರ ಪ್ರದರ್ಶನ ಮಾಡಲಾಯಿತು.ಪಾಣೆಮಂಗಳೂರು ವಲಯ ಮೇಲ್ವಿಚಾರಕಿ  ಅಮಿತಾ ವಂದಿಸಿ,ತುಂಬೆ ವಲಯ ಮೇಲ್ವಿಚಾರಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು.
ಸಮಾವೇಶದಲ್ಲಿ ಬಂಟ್ವಾಳ  ಯೋಜನಾ ಕಚೇರಿ ವ್ಯಾಪ್ತಿಯ ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ಕೃಷಿ ಮೇಲ್ವಿಚಾರಕರು ,ಕಛೇರಿ ಸಿಬಂದಿಗಳು, ಲೆಕ್ಕ ಪರಿಶೋಧಕರು,ವಲಯ ಮೇಲ್ವಿಚಾರಕರು, ಜ್ಞಾನ ವಿಕಾಸ ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು, ವಿ ಎಲ್ ಐ ಗಳು ಭಾಗವಹಿಸಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter