
ಪಾಜೆಗುಡ್ಡೆ: ಕಾರ್ಕಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಕಾರ್ಕಳ- ಧರ್ಮಸ್ಥಳ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ನಡೆದಿದೆ. ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರ ಸಾವುನ್ನಪ್ಪಿದ್ದಾರೆ.
ಕಾರ್ಕಳ ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರುನ ಪಾಜೆಗುಡ್ಡೆ ಬಳಿ ಬೈಕ್ ಮತ್ತು ಮಿನಿಲಾರಿ ಅಪಘಾತ ಸಂಭವಿಸಿದೆ. ಬೈಕ್ನಲ್ಲಿದ್ದ ನಾಲ್ವರ ಸಾವುನ್ನಪ್ಪಿದ್ದಾರೆ. ಸುರೇಶ್ ಆಚಾರ್ಯ ( 36 ), ಸಮೀಕ್ಷಾ (7) ಸುಶ್ಮೀತಾ (5) ಮತ್ತು ಸುಶಾಂತ್ (2) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಇನ್ನು ಈ ಅಪಘಾತದಲ್ಲಿ ಮೀನಾಕ್ಷಿ ಆಚಾರ್ಯ (32) ಗಂಭೀರವಾಗಿಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು. ಪೊಲೀಸರು ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ದೂರು ಕೂಡ ದಾಖಲಾಗಿದೆ.
