ಉಪ್ಪಿನಂಗಡಿ: ಮನೆಯೊಂದಕ್ಕೆ ಸಿಡಿಲು ಬಡಿದು ಗೋಡೆ ಬಿರುಕು, ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮ
ಉರುವಾಲು: ಉಪ್ಪಿನಂಗಡಿಯ ಉರುವಾಲು ಗ್ರಾಮದಲ್ಲಿ ಸೋಮವಾರ ಸಂಜೆ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ತಾರಿದಡಿ ನಿವಾಸಿ ಸೇಸಪ್ಪ ಎಂಬುವವರ ಮನೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆ ಬಿರುಕು ಬಿಟ್ಟಿದೆ. ಮನೆಯಲ್ಲಿದ್ದ ವಿದ್ಯುತ್ ಉಪಕರಣಗಳು ಸುಟ್ಟು ಭಸ್ಮವಾಗಿದೆ.
ಇನ್ನು ಈ ವೇಳೆ ಮನೆಯಲ್ಲಿ ಯಾರು ಇರಲಿಲ್ಲ, ಸೇಸಪ್ಪ ಅವರು ತಮ್ಮ ಮಕ್ಕಳನ್ನು ಕರೆದುಕೊಂಡು ಬರಲು ಶಾಲೆಗೆ ಹೋಗಿದ್ದರು. ಹೀಗಾಗಿ ಭಾರೀ ದೊಡ್ಡ ಅನಾಹುತ ತಪ್ಪಿದೆ. ಸಿಡಿಲು ಬಡಿದ ಪರಿಣಾಮ 9 ವರ್ಷಗಳ ಹಿಂದೆ ಕಟ್ಟಿದ್ದ ಈ ಕಾಂಕ್ರೀಟ್ ಮನೆ ಸಂಪೂರ್ಣ ಹಾನಿಗೀಡಾಗಿದೆ.