ಮಂಗಳೂರು: ಅ.3ರಿಂದ 14ವರೆಗೆ ಕುದ್ರೋಳಿ ದಸರಾ ಆರಂಭ, ಸಿಎಂ ಸಿದ್ದರಾಮಯ್ಯ ಭಾಗಿಯಾಗುವ ಸಾಧ್ಯತೆ
ಮಂಗಳೂರು ದಸರಾಕ್ಕೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ಎಲ್ಲ ಕಡೆ ತಯಾರಿ ಶುರುವಾಗಿದೆ. ಅದರಲ್ಲೂ ಕ್ರದೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ದಸರಾ ಈ ಭಾರೀ ಅದ್ಧೂರಿಯಾಗಿ ನಡೆಯಲಿದೆ. ಕುದ್ರೋಳಿ ದಸರಾ ಅಕ್ಟೋಬರ್ 3 ರಿಂದ 14ರವರೆಗೆ ನಡೆಯಲಿದೆ. ಅಕ್ಟೋಬರ್ 6 ರಂದು ಹಾಫ್ ಮ್ಯಾರಥಾನ್ ನಡೆಯಲಿದೆ. ಕಳೆದ ವರ್ಷ ವಾಕಥಾನ್ ಆಯೋಜಿಸಿದ್ದರೆ, ಈ ಬಾರಿ 21 ಕಿಮೀ ಹಾಫ್ ಮ್ಯಾರಥಾನ್ ನಡೆಯಲಿದ್ದು, 2000ಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.
ಅಕ್ಟೋಬರ್ 13ರಂದು ಭವ್ಯ ಮೆರವಣಿಗೆ ನಡೆಯಲಿದೆ, ದಸರಾದಂದು ಕುದ್ರೋಳಿ ನಗರವು ಬಣ್ಣ ಬಣ್ಣದ ದೀಪಗಳಿಂದ ಸುಂದರವಾಗಿ ಕಂಗೊಳಿಸಲಿದೆ. ಮಂಗಳೂರು ದಸರಾದಲ್ಲಿ ಹಲವು ಗಣ್ಯರು ಆಗಮಿಸುವ ನಿರೀಕ್ಷೆಯಿದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಈ ಬಗ್ಗೆ ಕದ್ರೋಳಿ ಕ್ಷೇತ್ರದ ಆಡಳಿತ ಮಂಡಳಿ ಹಾಗೂ ಸದಸ್ಯರು ಸುದ್ದಿಗೋಷ್ಠಿಯಲ್ಲಿ ಮಾಡಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಜನಾರ್ದನ ಪೂಜಾರಿ, ಕುದ್ರೋಳಿ ದೇವಸ್ಥಾನದ ಖಜಾಂಚಿ ಪದ್ಮರಾಜ್, ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿ ರವಿಶಂಕರ್ ಮಿಜಾರ್ ಮತ್ತಿತರರು ಉಪಸ್ಥಿತರಿದ್ದರು.