ವಿದ್ಯಾರ್ಥಿ ಮೇಲೆ ಹರಿದ ಟಿಪ್ಪರ್, ಸ್ಥಳದಲ್ಲೇ ಪ್ರಾಣ ಬಿಟ್ಟ ಧನುಷ್
ಕೋಟೇಶ್ವರ: ಕುಂದಾಪುರ ತಾಲೂಕು ಕೋಟೇಶ್ವರ ಹಾಲಾಡಿ ರಸ್ತೆಯ ಕಾಗೇರಿ ಎಂಬಲ್ಲಿ ಕಾಲೇಜು ಮುಗಿಸಿ ಸ್ನೇಹಿತರೊಂದಿಗೆ ತೆರಳುತ್ತಿದ್ದ ವಿದ್ಯಾರ್ಥಿ ಮೇಲೆ ಟಿಪ್ಪರ್ ಹರಿದಿರುವ ಘಟನೆ ನಡೆದಿದೆ. ಫುಟ್ಬಾತ್ನ ಇಂಟರ್ ಲಾಕ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಏಕಾಏಕಿ ವಿದ್ಯಾರ್ಥಿಯ ಹಿಂದಿನಿಂದ ಬಂದು ಟಿಪ್ಪರ್ ಡಿಕ್ಕಿ ಹೊಡೆದಿದೆ. ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಸಾವನ್ನಪ್ಪಿರುವ ವಿದ್ಯಾರ್ಥಿಯನ್ನು ಧನುಷ್ ಎಂದು ಗುರುತಿಸಲಾಗಿದೆ. ಧನುಷ್ ಕೋಟೇಶ್ವರದ ಕಾಳಾವರ ವರದರಾಜ ಶೆಟ್ಟಿ ಸರ್ಕಾರೀ ಕಾಲೇಜಿನ ಪ್ರಥಮ ಬಿಎಸ್ಸಿ ಓದುತ್ತಿದ್ದ ಎಂದು ಹೇಳಲಾಗಿದೆ. ಧನುಷ್ ತನ್ನ ಸ್ನೇಹಿತರೊಂದಿಗೆ ಕಾಲೇಜು ಮುಗಿಸಿ ಕೋಟೇಶ್ವರಕ್ಕೆ ತೆರಳುತ್ತಿದ್ದ, ರಸ್ತೆ ಬದಿಯ ಇಂಟರ್ ಲಾಕ್ ಮೇಲೆ ನಡೆದುಕೊಂಡು ಬರುತ್ತಿದ್ದ ವೇಳೆ ಅತೀ ವೇಗವಾಗಿ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಈ ಟಿಪ್ಪರ್ ಎದುರಿನಿಂದ ಬರುತ್ತಿದ್ದ ಕಾರನ್ನು ತಪ್ಪಿಸಲು ಬಲಬದಿಗೆ ಬಂದು ಧನುಷ್ಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ಧನುಷ್ ಲಾರಿಯಡಿಗೆ ಬಿದ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನ ಸ್ಥಳಕ್ಕೆ ಸ್ಥಳೀಯರು ಬಂದು ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವಿದ್ಯಾರ್ಥಿಯ ಪ್ರಾಣ ಸ್ಥಳದಲ್ಲೇ ಹೋಗಿದೆ. ಈ ಘಟನೆಯ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.