ಮೂಡುಬಿದಿರೆ: ನಗರದ ವಿವಿಧ ಅಂಗಡಿಗಳಿಗೆ ಶುಕ್ರವಾರ ದಾಳಿ ನಡೆಸಿದ ಪುರಸಭೆ ಅಧಿಕಾರಿಗಳು ಕೋಲ್ಡ್ ಸ್ಟೋರೇಜ್ನಲ್ಲಿ ಅಕ್ರಮವಾಗಿ ದಾಸ್ತಾನಿರಿಸಿದ್ದ ಸುಮಾರು 13 ಕೆಜಿ ಕೋಳಿ ಮಾಂಸವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಕೋಲ್ಡ್ ಸ್ಟೋರೇಜ್ ಹೊಂದಿರುವ ಅಂಗಡಿಗಳಲ್ಲಿ ಕೋಳಿಯನ್ನು ಮಾಂಸವನ್ನಾಗಿ ಪರಿವರ್ತಿಸಿ ಗ್ರಾಹಕರಿಗೆ ನೀಡಲಾಗುತ್ತದೆ ಎನ್ನಲಾಗಿದೆ. ಕೋಲ್ಡ್ ಸ್ಟೋರೇಜ್ನಲ್ಲಿ ಕೋಳಿಯನ್ನು ಮಾಂಸವನ್ನಾಗಿ ಮಾಡಿ ಮಾರಾಟ ಮಾಡಲು ಅವಕಾಶವಿರುವುದಿಲ್ಲ. ವ್ಯಾಪಾರ ಪರವಾನಿಗೆ ನಿಯಮವನ್ನು ಉಲ್ಲಂಘಿಸಿದ ವ್ಯಾಪಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಾರುಕಟ್ಟೆಯಲ್ಲಿ ಚಿಕನ್ ಸ್ಟಾಲ್ ಹೊಂದಿರುವ ನಸೀಬ್ ಎಂಬವರು ಸಹಾಯಕ ಆಯುಕ್ತ ಮತ್ತು ಪುರಸಭೆಗೆ ದೂರು ನೀಡಿದ್ದರು. ಈ ದೂರಿನ ಹಿನ್ನೆಲೆಯಲ್ಲಿ ಪುರಸಭೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ ಏಳು ಅಂಗಡಿಗಳಿಂದ ಸುಮಾರು 13 ಕೆಜಿ ಕೋಳಿ ಮಾಂಸ ವಶಪಡಿಸಿಕೊಂಡಿದ್ದಾರೆ.
