ಸ್ವಚ್ಛತಾ ಹಿ ಸೇವಾ ಹಾಗೂ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮ
ಬಂಟ್ವಾಳ: ಖಾದಿಗ್ರಾಮೋದ್ಯೋಗಕ್ಕೆ ಪ್ರಾಮುಖ್ಯತೆ ನೀಡಿ ಗ್ರಾಮೀಣ ಜನರ ಹಾಗೂ ಗೃಹಕೈಗಾರಿಕೆಗಳಿಗೆ ಬಲನೀಡಿದಲ್ಲಿ ದೇಶದ ಆರ್ಥಿಕತೆಗೆ ಬಲನೀಡಿದಂತಾಗುತ್ತದೆ ಎಂಬ ಮಹಾತ್ಮಗಾಂಧಿಯವರ ಆಶಯವನ್ನು ಪಾಲಿಸಬೇಕಾದ ಅಗತ್ಯತೆ ಇದೆ ಎಂದುಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶಿವಣ್ಣ ಪ್ರಭುರವರು ಹೇಳಿದರು.

ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣಸ್ವಾಮಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಅವರು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ.ಸುಯೋಗ ವರ್ಧನ್ ಡಿ.ಎಮ್.ರವರು ಮಾತನಾಡಿ ಮನುಷ್ಯನಾದವನು ಜೀವನದಲ್ಲಿ ಸೇವಾಮನೋಭಾವವನ್ನು ಬೆಳಸಿಕೊಳ್ಳಬೇಕೆಂದರು. ಎಸ್.ವಿ.ಎಸ್. ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುದರ್ಶನ್ ಬಿ ಉಪಸ್ಥಿತರಿದ್ದರು

ರಾ.ಸೇ.ಯೋ. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಹೆಚ್.ವಿ. ಸ್ವಾಗತಿಸಿದರು, ಉಪನ್ಯಾಸಕರಾದ ಲಕ್ಷ್ಮಣ್ ವಂದಿಸಿದರು. ಮನೋಹರ್ ಎಸ್ ದೊಡ್ಡಮನಿ ಕಾರ್ಯಕ್ರಮ ನಿರೂಪಿಸಿದರು ಕು.ಹೇಮಲತಾ ಪ್ರಾರ್ಥಿಸಿದರು.
ಕಾರ್ಯಕ್ರಮದ ನಂತರ ‘ಸ್ವಚ್ಛತಾ ಹಿ ಸೇವಾ’ ಯೋಜನೆಯಡಿಯಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರು ಕಾಲೇಜು ಪರಿಸರವನ್ನು ಸ್ವಚ್ಛಗೊಳಿಸಿದರು.