ಸಿದ್ದಕಟ್ಟೆ : ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರಕ್ಕೆ ಚಾಲನೆ
ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ನ ರಾಷ್ಟ್ರೀಯ ಸೇವಾ ಯೋಜನೆಯ 2024- 25 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಲಾಯಿತು.ಸಿದ್ದಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯುವ ಶಿಬರವನ್ನು ತಾ.ಪಂ.ಮಾಜಿ ಸದಸ್ಯ ಅರ್ಕಕೀರ್ತಿ ಇಂದ್ರ ಅವರು ಉದ್ಘಾಟಿಸಿ, “ವಿದ್ಯಾರ್ಥಿಗಳು ಜೀವನದಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಂಡು ಸಮಾಜಕ್ಕೆ ತಮ್ಮದೇ ಆದಂತಹ ಕೊಡುಗೆಯನ್ನು ನೀಡಬೇಕು, ವ್ಯಕ್ತಿತ್ವವನ್ನು ವಿಕಸನಕ್ಕೆ ರಾಷ್ಟ್ರೀಯ ಸೇವಾ ಯೋಜನೆಯು ಒಂದು ಉತ್ತಮವಾದ ವೇದಿಕೆಯಾಗಿದೆ” ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಉದ್ಯಮಿ ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ ಅವರು ಮಾತನಾಡಿ, ವಿದ್ಯಾರ್ಥಿ ಜೀವನವು ಅಮೂಲ್ಯವಾದದ್ದು ಹಾಗೂ ಸಿಗುವಂತ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ತಮ್ಮ ಭವಿಷ್ಯವನ್ನು ರೂಪಿಸಿ ಕೊಳ್ಳಬೇಕುಎಂದರು.ಸಮಾರಂಭದ ಅಧ್ಯಕ್ಷತೆಯನ್ನು ಸಹಕಾರಿ ವ್ಯವಸಾಯಿಕ ಸೇವಾ ಸಂಘ ನಿಯಮಿತದ ಅಧ್ಯಕ್ಷ ಪ್ರಭಾಕರ ಪ್ರಭು ವಹಿಸಿದ್ದರು.
ಸಿದ್ದಕಟ್ಟೆ ಸರಕಾರಿ ಪ್ರೌಢ ಶಾಲೆಯಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಉಮೇಶ್ ಗೌಡ,ಸಿದ್ದಕಟ್ಟೆ ಪಲ್ಗುಣಿ ರೋಟರಿಕ್ಲಬ್ ಅಧ್ಯಕ್ಷಶಿವಯ್ಯ, ಸರಕಾರಿ ಪದವಿ ಪೂರ್ವ ಕಾಲೇಜಿನ ಕಾಲೇಜಿನ ಅಭಿವೃದ್ಧಿ ಸಮಿತಿಯ ಸದಸ್ಯರಾದ ವೀರಪ್ಪಗೌಡ ಕೊಡಂಗೆ, ಪ್ರಾಂಶುಪಾಲರಾದ ಉದಯಕುಮಾರ್, ಹಿರಿಯ ಉಪನ್ಯಾಸಕರಾದ ಶ್ರೀನಿವಾಸ ನಾಯ್ಕ, ಉಪ ಪ್ರಾಂಶುಪಾಲರಾದ ಲೋನಾ ಲೋಬೋ, ಸಹ ಶಿಕ್ಷಕರಾದ ಉಮೇಶ್ ಕುಮಾರ್ ವಿ ಕರ್ಕೇರ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಅಧಿಕಾರಿ ಶೀನಪ್ಪ ಎನ್ ಸ್ವಾಗತಿಸಿದರು, ಶಿಬಿರಾರ್ಥಿ ಲತೀಶ್ ವಂದಿಸಿದರು. ಉಪನ್ಯಾಸಕರಾದ ಸಂಜಯ್ ಬಿ ಎಸ್ ಕಾರ್ಯಕ್ರಮ ನಿರೂಪಿಸಿದರು.